Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಎಚ್ಚರ: ಪುರುಷ–ಪುರುಷ ಸೆಕ್ಸ್ ಮಾಡಿದ್ರೆ ಬರುತ್ತಂತೆ ಮಂಕಿಪಾಕ್ಸ್..!! ವಿಶ್ವ ಆರೋಗ್ಯ ಸಂಸ್ಥೆ
    ಇತ್ತೀಚಿನ ಸುದ್ದಿ

    ಎಚ್ಚರ: ಪುರುಷ–ಪುರುಷ ಸೆಕ್ಸ್ ಮಾಡಿದ್ರೆ ಬರುತ್ತಂತೆ ಮಂಕಿಪಾಕ್ಸ್..!! ವಿಶ್ವ ಆರೋಗ್ಯ ಸಂಸ್ಥೆ

    July 19, 2022
    Share

    ಜಿನೀವಾ: ವಿದೇಶಗಳಲ್ಲಿ ಕಾಣಿಸಿಕೊಂಡು ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಅಥವಾ ಮಂಗನ ಸಿಡುಬು ಖಾಯಿಲೆಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಚ್ಚರಿಯ ಮಾಹಿತಿಯೊಂದನ್ನು ನೀಡಿದೆ. 50ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಈ ವರ್ಷ 3,200ಕ್ಕಿಂತ ಅಧಿಕ ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ಡಬ್ಲ್ಯುಎಚ್‌ಒಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಡಬ್ಲ್ಯುಎಚ್‌ಒ ಮತ್ತೊಂದು ಅಚ್ಚರಿ ಮಾಹಿತಿ ನೀಡಿದ್ದು, ಮಂಕಿಪಾಕ್ಸ್‌ ಕಂಡು ಬಂದಿರುವವರು ಬಹುತೇಕರು ಮಧ್ಯವಯಸ್ಸಿನವರಾಗಿದ್ದಾರೆ. ಅಲ್ಲದೇ ಇವರಲ್ಲಿ ಬಹುತೇಕರು ಪುರುಷರೇ ಆಗಿದ್ದಾರೆ. ಇನ್ನೂ ವಿಚಿತ್ರವೆಂದರೆ ಈ ಖಾಯಿಲೆ ಕಾಣಿಸಿಕೊಂಡ ಪ್ರತಿ ಐವರಲ್ಲಿ ಮೂವರು, ಪುರುಷ ಮತ್ತು ಪುರುಷ ಲೈಂಗಿಕ ಸಂಪರ್ಕ ಮಾಡಿರುವವರು ಎಂದು ಡಬ್ಲ್ಯುಎಚ್‌ಒ ಹೇಳಿಕೆ ನೀಡಿದೆ. ‘ಮಂಕಿಪಾಕ್ಸ್’ ಪ್ರಕರಣಗಳು ಏರಿಕೆಯಾಗುತ್ತಿರುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮುಖ್ಯಸ್ಥ ಟೆಡ್ರೋಸ್ ಗೆಬ್ರೇಯೇಸಸ್‌ ಕಳವಳ ವ್ಯಕ್ತಪಡಿಸಿದ್ದು, ಸದ್ಯ ಈ ಸೋಂಕು ಆರೋಗ್ಯ ತುರ್ತುಸ್ಥಿತಿಯಲ್ಲ ಎಂದು ಶನಿವಾರ ಹೇಳಿದ್ದರು. ಪಶ್ಚಿಮ ಮತ್ತು ಮಧ್ಯ ಆಫ್ರಿಕಾ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದ ‘ಮಂಕಿಪಾಕ್ಸ್‌’ ಪ್ರಕರಣಗಳು ಮೇ ತಿಂಗಳಿನಿಂದ ಈಚೆಗೆ ಇತರ ದೇಶಗಳಲ್ಲಿಯೂ ಉಲ್ಬಣಗೊಂಡಿವೆ. ಹೆಚ್ಚಾಗಿ ಪಶ್ಚಿಮ ಯುರೋಪ್‌ನಲ್ಲಿ ಪತ್ತೆಯಾಗುತ್ತಿವೆ.ದುಬೈಯಿಂದ ಬಂದಿದ್ದ ಕೇರಳದ ಕಣ್ಣೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆಯಷ್ಟೇ ‘ಮಂಕಿಪಾಕ್ಸ್‌’ ತಗುಲಿರುವುದು ಭಾರತದಲ್ಲಿ ಖಾತರಿಯಾಗಿತ್ತು. ದೇಶದಲ್ಲಿ ಪತ್ತೆಯಾದ ಎರಡನೇ ಪ್ರಕರಣ ಇದಾಗಿದೆ.

    Post Views: 359

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.