Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಎನ್‌ಪಿಎಸ್ ಹಿಂಪಡೆದು ಹಳೆ ಪಿಂಚಣಿ ಯೋಜನೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
    ಇತ್ತೀಚಿನ ಸುದ್ದಿ

    ಎನ್‌ಪಿಎಸ್ ಹಿಂಪಡೆದು ಹಳೆ ಪಿಂಚಣಿ ಯೋಜನೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

    January 21, 2024
    Share

    ಕುಂದಾಪುರ: ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ (ರಿ), ಬೆಂಗಳೂರು ಇದರ ಉಡುಪಿ ಜಿಲ್ಲಾ ಹಾಗೂ ಕುಂದಾಪುರ ತಾಲೂಕು ಘಟಕದ ವತಿಯಿಂದ ಹೊಸ ಪಿಂಚಣಿ ಯೋಜನೆಯನ್ನು ಎನ್.ಪಿ.ಎಸ್. ಹಿಂಪಡೆದು ಈ ಹಿಂದಿನಂತೆ ಹಳೆ ಪಿಂಚಣಿ ಯೋಜನೆಯನ್ನು ಒಪಿಎಸ್ ಮರು ಅನುಷ್ಠಾನ ಮಾಡಲು ಶಿಫಾರಸ್ಸು ಮಾಡುವಂತೆ ಬೆಂಬಲ ಕೋರಿ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಯಿತು.

    ಈ ಸಂದರ್ಭ ಮಾತನಾಡಿದ ಕುಂದಾಪುರ ತಾಲೂಕು ಸರ್ಕಾರೀ ಹೊಸ ಪಿಂಚಣಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ, 2010ರಿಂದ ನಮ್ಮ ಹೋರಾಟ ಶಾಂತಿಯುತವಾಗಿ ನಡೆಯುತ್ತಾ ಬಂದಿದೆ. ಬೆಂಗಳೂರಿನಲ್ಲಿ 15 ದಿನಗಳ ಕಾಲ ಮಾಡು ಇಲ್ಲವೇ ಮಡಿ ಎನ್ನುವ ಹೋರಾಟ ನಡೆದಿದೆ. ರಾಜ್ಯದ 2 ಲಕ್ಷಕ್ಕೂ ಹೆಚ್ಚಿನ ಸರ್ಕಾರೀ ನೌಕರರಿಗೆ ನಿಶ್ಚಿತ ಪಿಂಚಣಿ ಇಲ್ಲದೇ ಅತಂತ್ರವಾಗಿದ್ದು, ನಮ್ಮ ಸಂಧ್ಯಾಕಾಲದಲ್ಲಿ ಜೀವನ ಭದ್ರತೆಯ ಭರವಸೆ ನೀಡಬೇಕು ಎಂದು ಆಗ್ರಹಿಸಿದರು.ಹೊಸ ಪಿಂಚಣಿ ಯೋಜನೆಯಲ್ಲಿ, ನೌಕರರ ಪ್ರತಿ ತಿಂಗಳ ಸಂಬಳದಲ್ಲಿ ಶೇ. 10 ರಷ್ಟು ಕಟಾವಣೆ ಮಾಡಿ, ಸರ್ಕಾರ ಶೇ.14 ಹಣವನ್ನು ಸೇರಿಸಿ ಷೇರು ಮಾರುಕಟ್ಟೆಯಲ್ಲಿ ವಿನಿಯೋಗಿಸಲಾಗುತ್ತಿದೆ. ಇದು ಅವೈಜ್ಞಾನಿಕ ಹಾಗೂ ಮಾರಕ ಪದ್ದತಿಯಾಗಿದ್ದು, ನಿವೃತ್ತಿ ನಂತರದಲ್ಲಿ ಲಭಿಸುವ ಅಲ್ಪ ಮೊತ್ತದ ಹಣದಿಂದಾಗಿ ಜೀವನ ಸಾಗಿಸುವುದು ಕಷ್ಟಕರವಾಗಿದೆ ಸರ್ಕಾರ ಈಗಾಗಲೇ ಒಪ್ಪಿಕೊಂಡಂತೆ ಆರನೇ ಗ್ಯಾರಂಟಿಯಾಗಿ ಎನ್.ಪಿ.ಎಸ್. ತೆಗೆದು ಒಪಿಎಸ್ ಅಳವಡಿಸಬೇಕು. ಅಲ್ಲಿಯ ವರೆಗೆ ನಮ್ಮ ಹೋರಾಟ ನಿಲ್ಲದು ಎಂದು ಶಿಕ್ಷಕಿ ಚೈತ್ರ ಬಿ ಶೆಟ್ಟಿ ಆಗ್ರಹಿಸಿದರು.ಸರ್ಕಾರ ಈಗಾಗಲೇ ತನ್ನ ಪ್ರಣಾಳಿಕೆಯಲ್ಲಿ ಎನ್.ಪಿ.ಎಸ್. ಬದಲು ಒಪಿಎಸ್ ಅಳವಡಿಸುವ ಭರವಸೆ ನೀಡಿದೆ. ಆದರೆ ಅದರ ಅನುಷ್ಠಾನವಾಗಿಲ್ಲ. ತಕ್ಷಣ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಸಂಘದ ಕಾರ್ಯದರ್ಶಿ ಗಣೇಶ್ ಶೆಟ್ಟಿ ಆಗ್ರಹಿಸಿದರು.ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ, ಕುಂದಾಪುರ ಘಟಕದ ಉಪಾಧ್ಯಕ್ಷೆ ಸುನೀತಾ, ರಾಘವೇಂದ್ರ ಎಂ, ಖಜಾಂಜಿ ಗುರುಮೂರ್ತಿ, ಕುಂದಾಪುರ ತಾಲೂಕು ಆಸ್ಪತ್ರೆ ಶುಶ್ರುಷಾಧಿಕಾರಿ ಭಾರತಿ, ಪಲ್ಲವಿ, ಸಂಧ್ಯಾ ಶೆಟ್ಟಿ, ರಾಜೀವ ಶೆಟ್ಟಿ ಕಳಿ, ಹಾಗೂ ಇತರ ಎಂ ಪಿ ಎಸ್ ನೌಕರರ ಪದಾಧಿಕಾರಿಗಳು ಹಾಜರಿದ್ದರು.

    Post Views: 223

    Related Posts

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.