ಮಂಗಳೂರು: ದೇಹದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕಂಡು ಹಿಡಿದಿದ್ದಾರೆ.
ದುಬೈನಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದು, ತಪಾಸಣೆ ವೇಳೆ 45,83,160 ರೂ. ಮೌಲ್ಯದ 24 ಕ್ಯಾರೆಟ್ನ 878 ಗ್ರಾಂ ಚಿನ್ನವನ್ನು ಪತ್ತೆಹಚ್ಚಿದ್ದಾರೆ. ಬಂಟ್ವಾಳ ಮೂಲದ ಪ್ರಯಾಣಿಕ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್ಗಳಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.