Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಆನ್‌ಲೈನ್‌ ಹೂಡಿಕೆ ನೆಪದಲ್ಲಿ 1.14 ಕೋ. ರೂ. ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು : ಆನ್‌ಲೈನ್‌ ಹೂಡಿಕೆ ನೆಪದಲ್ಲಿ 1.14 ಕೋ. ರೂ. ವಂಚನೆ

    September 8, 2025
    Share

    ಮಂಗಳೂರು: ಆನ್‌ಲೈನ್‌ ಮೂಲಕ ಹೂಡಿಕೆ ಮಾಡಿದರೆ ಭಾರಿ ಲಾಭ ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1.14 ಕೋ. ರೂ. ವಂಚಿಸಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

    ದೂರುದಾರ ತನ್ನ ಜೀವಮಾನದ ಉಳಿತಾಯವನ್ನೆಲ್ಲ ವಂಚಕರ ಕೈಗಿತ್ತು ಈಗ ಪರಿತಪಿಸುತ್ತಿದ್ದಾರೆ. ಜು.14ರಂದು ಅಪರಿಚಿತ ವ್ಯಕ್ತಿಯೊಬ್ಬ ಅವರನ್ನು ಸ್ಟಾಕ್‌ ಎಕ್ಸ್‌ಚೇಂಜ್‌ ಎಂಬ ವಾಟ್ಸಪ್‌ ಗ್ರೂಪ್‌ಗೆ ಸೇರಿಸಿ ಷೇರುಗಳಲ್ಲಿ ಆನ್‌ಲೈನ್‌ ಮೂಲಕ ಹೂಡಿಕೆ ಮಾಡಿದೆ ಭಾರಿ ಲಾಭ ಗಳಿಸಬಹುದು ಎಂದು ಹೇಳಿದ್ದ.

    ನಂತರ ದೂರುದಾರ ಆ.11ರಂದು ಈ ಗ್ರೂಪ್‌ನಲ್ಲಿ ಕ್ರಿಸ್ಟಿನ್‌ ಎಂಬ ಮಹಿಳೆಯನ್ನು ಸಂಪರ್ಕಿಸಿ ಹೂಡಿಕೆ ಬಗ್ಗೆ ವಿಚಾರಿಸಿದ್ದರು. ಕ್ರಿಸ್ಟಿನ್‌ ಮತ್ತು ಗ್ರೂಪ್‌ನ ಅಡ್ಮಿನ್‌ ವೀರೇಂದರ್‌ ಸಿಂಗ್‌ ಎಂಬಾತ ಹೇಳಿದಂತೆ ಅವರು ಕೊಟ್ಟ ಬ್ಯಾಂಕ್‌ ಖಾತೆಗಳಿಗೆ ಆರ್‌ಟಿಜಿಎಸ್‌ ಮತ್ತು ನೆಫ್ಟ್‌ ಮೂಲಕ ಹಂತಹಂತವಾಗಿ 1.14 ಕೋಟಿ ರೂಪಾಯಿ ವರ್ಗಾಯಿಸಿದ್ದರು. ಬಳಿಕ ವಂಚಕರು ತಮ್ಮ ವರಸೆ ಪ್ರಾರಂಭಿಸಿದ್ದು, ಹೆಚ್ಚಿನ ತೆರಿಗೆ ಪಾವತಿಸಬೇಕು, ಇನ್ನಷ್ಟು ಹೂಡಿಕೆ ಮಾಡದಿದ್ದರೆ ಹಣ ವಾಪಸು ಪಡೆಯಲು ಆಗುವುದಿಲ್ಲ ಎಂದೆಲ್ಲ ಹೇಳಿದ್ದರು. ಮೋಸ ಹೋದದ್ದು ಅರಿವಾದ ಬಳಿಕ ಸೈಬರ್‌ ಠಾಣೆಗೆ ದೂರು ನೀಡಿದ್ದಾರೆ.

    Post Views: 106

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.