Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮನೆಗೆ ನುಗ್ಗಿದ ಕಳ್ಳರು: ಲ್ಯಾಪ್‌ಟಾಪ್, ಟ್ಯಾಬ್, ಸುಮಾರು ಅಂದಾಜು 1.5 ಲ.ರೂ. ನಗದು, ಚಿನ್ನಾಭರಣ ಕಳವು
    ಇತ್ತೀಚಿನ ಸುದ್ದಿ

    ಮನೆಗೆ ನುಗ್ಗಿದ ಕಳ್ಳರು: ಲ್ಯಾಪ್‌ಟಾಪ್, ಟ್ಯಾಬ್, ಸುಮಾರು ಅಂದಾಜು 1.5 ಲ.ರೂ. ನಗದು, ಚಿನ್ನಾಭರಣ ಕಳವು

    August 5, 2024
    Share

    ಉಡುಪಿ: ಖಾಲಿ ಮನೆಗೆ ನುಗ್ಗಿದ ಕಳ್ಳರು ಲ್ಯಾಪ್‌ಟಾಪ್, ಟ್ಯಾಬ್, ಸುಮಾರು ಅಂದಾಜು 1.5 ಲ.ರೂ. ನಗದು, ಚಿನ್ನಾಭರಣಗಳನ್ನು ಕಳವು ಮಾಡಿ ಹೋದ ಘಟನೆ ನಗರದ ಬುಡ್ನಾರಿನಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಮನೆಯ ಸಂಬಂಧಿಕರು ತಿಳಿಸಿದ್ದಾರೆ. 

    ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದು, ಕದ್ದ ಸೊತ್ತುಗಳ ನಿಖರ ಮೌಲ್ಯ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ನಗರ ಠಾಣೆಯ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ. 

    ಕೆ. ಮೊಹಮ್ಮದ್ ಅವರು 6 ತಿಂಗಳ ಹಿಂದೆಯಷ್ಟೇ ನಿಧನ ಹೊಂದಿದ್ದರು. ಕೆ. ಮೊಹಮ್ಮದ್ ಅವರಿಗೆ ಸೇರಿದ ಗ್ರೀಮ್ ಹೌಸ್‌ನಲ್ಲಿ ಈ ಘಟನೆ ನಡೆದಿದೆ. ಕಳವು ನಡೆದ ಮನೆಯಲ್ಲಿ ತಾಯಿ ಹಾಗೂ ಮಗಳು ಇಬ್ಬರೇ ವಾಸಮಾಡಿಕೊಂಡಿದ್ದರು. 

    ಶನಿವಾರ ಸಂಜೆ ತಾಯಿ ಹಾಗೂ ಮಗಳು ಮಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಮನೆಯವರು ನಾವಿಲ್ಲದಿದ್ದರೂ ಹೊರ ಭಾಗದಲ್ಲಿ ಸ್ವಚ್ಛ ಮಾಡುವಂತೆ ತಿಳಿಸಿದ ಮೇರೆಗೆ ಕೆಲಸದಾಕೆ ರವಿವಾರ ಬೆಳಗ್ಗೆ ಬಂದಿದ್ದಾಗ ಬಾಗಿಲು ಒಡೆದಿತ್ತು. ಕೂಡಲೇ ಕೆಲಸದಾಕೆ ಈ ವಿಚಾರವನ್ನು ಪಕ್ಕದ ಮನೆಯವರ ಬಳಿ ತಿಳಿಸಿದ ಮೇರೆಗೆ ಈ ಘಟನೆ ಬೆಳಕಿಗೆ ಬಂದಿದೆ. 

    ಕಳ್ಳರು ಮನೆಯ ಚಿಲಕ ತೆಗೆದು ಒಳಭಾಗದಲ್ಲಿದ್ದ ಕಪಾಟಿನಲ್ಲಿ ಇಟ್ಟಿದ್ದ ಹಣವನ್ನು ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗುತ್ತಿದೆ. 

    ಮನೆಯಲ್ಲಿ ಇಟ್ಟಿರುವ ಹಣದ ಪ್ರಮಾಣ ಎಷ್ಟು ಹಾಗೂ ಇತರ ವಸ್ತುಗಳು ಏನಿತ್ತು ಎಂಬುವುದರ ಬಗ್ಗೆ ರವಿವಾರ ತಡರಾತ್ರಿಯವರೆಗೂ ಪೊಲೀಸರು ಮಾಹಿತಿ ಸಂಗ್ರಹಿಸಿದರು. ಸಂಪೂರ್ಣ ಮಾಹಿತಿ ಲಭಿಸಿದ ಬಳಿಕ ಎಫ್‌ಐಆ‌ರ್ ದಾಖಲಿಸ ಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 197

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.