Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರಗೈದ ಆರೋಪಿಗೆ 10ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರಗೈದ ಆರೋಪಿಗೆ 10ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

    August 31, 2024
    Share

    ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿರುವ ಯುವಕನ ಮೇಲಿನ ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಜೊತೆಗೆ ಆರೋಪಿಯ ತಂದೆ ಹಾಗೂ ಭಾವನಿಗೂ 5ವರ್ಷಗಳ ಕಾರಾಗೃಹ ಶಿಕ್ಷೆಗೊಳಗಾಗಿದ್ದಾರೆ‌. ಪುತ್ತೂರು ಕಬಕದ ನಿವಾಸಿ ನಿತೇಶ್(39) ಶಿಕ್ಷೆಗೊಳಗಾದ ಆರೋಪಿ. ಈತನೊಂದಿಗೆ ತಂದೆ ರಾಮಣ್ಣ ಪೂಜಾರಿ(63) ಮತ್ತು ಭಾವ ನಿಖಿತಾಶ್ ಸುವರ್ಣ(40) 5ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೊಳಗಾದವರು. ನಿತೇಶ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ತನ್ನ ಮನೆಯಲ್ಲಿ ಅತ್ಯಾಚಾರವೆಸಗಿದ್ದ. ಅಲ್ಲದೆ ಆಕೆಯ ಮನೆಯಲ್ಲೂ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಯುವತಿ ಮದುವೆಯಾಗಲು ಕೇಳಿಕೊಂಡಾಗ ನಿರಾಕರಿಸಿ, ಜಾತಿ ಬೇರೆಯಾಗಿರುವುದರಿಂದ ತಂದೆ ಮತ್ತು ಭಾವ ಒಪ್ಪುತ್ತಿಲ್ಲ ಎಂದು ಹೇಳಿದ್ದ. ಆಕೆ ತಂದೆ ಹಾಗೂ ಭಾವನ ಬಳಿ ಕೇಳಿಕೊಂಡಾಗ ಅವರು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆಯೊಡ್ಡಿದ್ದರು.

    ಆದ್ದರಿಂದ 2019ರಲ್ಲಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಳು. ಅಂದಿನ ಇನ್‌ಸ್ಪೆಕ್ಟರ್ ತಿಮ್ಮಪ್ಪ ನಾಯಕ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ ನಿತೇಶ್ ಮೇಲಿನ ಆರೋಪ ಸಾಬೀತಾಗಿದೆ ಎಂದು 10ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, 15,000ರೂ. ದಂಡ ವಿಧಿಸಿದ್ದಾರೆ. ರಾಮಣ್ಣ ಪೂಜಾರಿ ಮತ್ತು ನಿಖಿತಾಶ್‌ಗೆ 5ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 15000ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ನೊಂದ ಯುವತಿಗೆ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಪಾರಸ್ಸು ಮಾಡಿದ್ದಾರೆ. ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕರಾದ ಬಿ.ಶೇಖರ ಶೆಟ್ಟಿ ಮತ್ತು ಚೌಧರಿ ಮೋತಿಲಾಲ್ ವಾದ ಮಂಡಿಸಿದ್ದರು.

    Post Views: 388

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.