Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನ ಬಂಧನ!
    ಇತ್ತೀಚಿನ ಸುದ್ದಿ

    ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನ ಬಂಧನ!

    January 30, 2026
    Share

    ಮಂಗಳೂರು: ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜ 23 ರಂದು ಸಂಜೆ ಸಮಯ ಸುಮಾರು 7ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000/- ನಗದು ಹಣ ಇರುವ ಟ್ರಾಯಲಿ ಬ್ಯಾಗ್ ನ್ನು ಇಟ್ಟು ಕುಳಿತುಕೊಂಡಿದ್ದ ಸಮಯ ಯಾರೋ ಕಳ್ಳರು ಚಿನ್ನಾಭರಣಗಳಿರುವ ಬ್ಯಾಗ್ ನ್ನು ಕಳವು ಮಾಡಿಕೊಂಡ ಹೋದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

    ಈ ಪ್ರಕರಣದ ಪತ್ತೆಯ ಕುರಿತು ವಿಶೇಷ ತಂಡವನ್ನು ರಚಿಸಿದ್ದು, ಸಹಾಯಕ ಪೊಲೀಸ್ ಆಯುಕ್ತರು, ಕೇಂದ್ರ ಉಪವಿಭಾಗದವರ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖಾಧಿಕಾರಿ ವಿನಾಯಕ ತೊರಗಲ್, ಪಿ.ಎಸ್.ಐ ಮತ್ತು ಸಿಬ್ಬಂದಿಗಳಾದ ಸುಜನ್, ವಾಸುದೇವ, ರವಿ ಲಮಾಣಿ, ಸಿದ್ದು, ಹರೀಶ್, ನಿತಿಶ್, ಗಾಲಿಬ್ ರವರೊಂದಿಗೆ, ಕಳವು ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನಾದ ಮಹಮ್ಮದ್ ಇಮ್ರಾನ್ ಎನ್.ಎಮ್ (44 )ಎಂಬಾತನನ್ನು ಜ. 28 ರಂದು ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ ನ ಬಳಿಯಲ್ಲಿ ದಸ್ತಗಿರಿ ಮಾಡಿ ಆರೋಪಿತನಿಂದ ಒಟ್ಟು ರೂ 6,47,920/- ಬೆಲೆಬಾಳುವ 46.28 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ರೂ.5000/- ನಗದು ಹಣವನ್ನು ಸ್ವಾಧೀನಪಡಿಸಲಾಗಿದೆ.

    ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಜ. 29 ರಂದು ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿಯು ಬಸ್ಸು ನಿಲ್ದಾಣಗಳಲ್ಲಿ ಬೆಲೆಬಾಳುವ ಸೊತ್ತುಗಳಿರುವ ಬ್ಯಾಗ್ ಗಳನ್ನು ಕಳ್ಳತನ ಮಾಡುವ ರೂಢಿಗತ ಆರೋಪಿಯಾಗಿದ್ದು ಹಾಗೂ ಈತನ ಮೇಲೆ ಒಟ್ಟು 11 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿತನ ಮೇಲೆ ದುದ್ದ ಪೊಲೀಸ್ ಠಾಣೆಯಲ್ಲಿ-1, ಕೊಮನೂರು ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ-1, ಹಾಸನ ನಗರ ಪೊಲೀಸ್ ಠಾಣೆಯಲ್ಲಿ-1, ಚೆನ್ನರಾಯಪಟ್ಟಣ ನಗರ ಠಾಣೆಯಲ್ಲಿ-1, ಮೈಸೂರು ದೇವರಾಜ ನಗರ ಪೊಲೀಸ್ ಠಾಣೆಯಲ್ಲಿ-1 ಬ್ಯಾಗ್ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಹಾಸನ ಜಿಲ್ಲೆ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ -2, ಹಾಸನ ಜಿಲ್ಲೆ ದುದ್ದ ಪೊಲೀಸ್ ಠಾಣೆಯಲ್ಲಿ-1 ಮನೆ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.ಅಲ್ಲದೇ ಆರೋಪಿತನು ಹಾಸನ ಜಿಲ್ಲೆಯ ಮನೆಕಳವು ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಮಾನ್ಯ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ಮಾನ್ಯ ನ್ಯಾಯಾಲಯವು ಆರೋಪಿತನ ವಿರುದ್ದ ವಾರೆಂಟ್ ನ್ನು ಕೂಡಾ ಹೊರಡಿಸಿರುತ್ತಾರೆ. ಎಂದು ವರದಿ ಮೂಲಕ ತಿಳಿದು ಬಂದಿದೆ.

    Post Views: 153

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.