Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂದಾಪುರ: ಚಪ್ಪಲಿ ಹೊಲಿಯುವ ಕಾರ್ಮಿಕನನ್ನು ದೆಹಲಿ ಗಣರಾಜ್ಯೋತ್ಸವಕ್ಕೆ ಆಹ್ವಾನಿಸಿದ ಪ್ರಧಾನಿ ನರೇಂದ್ರ ಮೋದಿ
    ಇತ್ತೀಚಿನ ಸುದ್ದಿ

    ಕುಂದಾಪುರ: ಚಪ್ಪಲಿ ಹೊಲಿಯುವ ಕಾರ್ಮಿಕನನ್ನು ದೆಹಲಿ ಗಣರಾಜ್ಯೋತ್ಸವಕ್ಕೆ ಆಹ್ವಾನಿಸಿದ ಪ್ರಧಾನಿ ನರೇಂದ್ರ ಮೋದಿ

    October 16, 2023
    Share

    ಕುಂದಾಪುರ: 2024ರ ಗಣರಾಜ್ಯೋತ್ಸವಕ್ಕೆ ಕುಂದಾಪುರದ ಬೀದಿ ಬದಿಯ ಚಪ್ಪಲಿ ರಿಪೇರಿ ಕಾರ್ಮಿಕನೊಬ್ಬನಿಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ. ಆ ಮೂಲಕ ಸಮಾಜದ ಕಟ್ಟಕಡೆಯ ಕಾರ್ಮಿಕನಿಗೂ ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವವನ್ನು ಕಣ್ಣುತುಂಬಿಸಿಕೊಳ್ಳುವ ಅವಕಾಶ ಬಂದಿದೆ.
    ಕುಂದಾಪುರದ ಶಾಸ್ತ್ರೀ ವೃತ್ತದ ಸಮೀಪ ಕಳೆದ ಎರಡೂವರೆ ದಶಕಗಳಿಂದ ಚಪ್ಪಲಿ, ಕೊಡೆ ರಿಪೇರಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಮಣಿಕಂಠ ಎಂಬುವರೇ ಮುಂದಿನ ಬಾರಿಯ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಅವಕಾಶ ಗಿಟ್ಟಿಸಿಕೊಂಡವರು.ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಶಾಸ್ತ್ರೀ ಸರ್ಕಲ್‌ನಲ್ಲಿ ಲಿಡ್ಕರ್‌ನ ಪಾದರಕ್ಷೆ ರಿಪೇರಿ ಮಾಡುವ ಪೆಟ್ಟಿಗೆ ಅಂಗಡಿಯಲ್ಲಿ ದುಡಿಯುತ್ತಿರುವ ಮಣಿಕಂಠ ಅವರನ್ನು ಈ ಬಾರಿ ಗಣರಾಜ್ಯೋತ್ಸವಕ್ಕೆ ಆಹ್ವಾನಿಸಿರುವ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.ಮೂಲತಃ ಭದ್ರಾವತಿಯವರಾದ ಅವರ ಅಜ್ಜ ಮುನುಸ್ವಾಮಿ ಸುಮಾರು 50 ವರ್ಷಗಳ ಹಿಂದೆ ಇಲ್ಲಿಗೆ ಬಂದು ಈ ಚಪ್ಪಲಿ ರಿಪೇರಿ ಅಂಗಡಿಯನ್ನು ಆರಂಭಿಸಿದರು. ಸ್ವಲ್ಪ ಸಮಯ ಮಣಿಕಂಠ ಅವರ ತಂದೆ ಇದನ್ನು ಮುಂದುವರಿಸಿದರು, ಅವರ ಅನಾರೋಗ್ಯದ ಮಣಿಕಂಠ ಈ ಕುಲಕಸುಬನ್ನು ಮುನ್ನಡೆಸುತ್ತಿದ್ದಾರೆ.ನಾನು ಸಾಮಾನ್ಯ ಜನರು ಮಾಡುವ ಕೆಲಸವನ್ನು ಮಾಡಿದ್ದೇನೆ. ನನ್ನ ಜವಾಬ್ದಾರಿ ಅದು. ಸರ್ಕಾರ ನಮ್ಮನ್ನು ಗುರುತಿಸಿರುವುದು ನಿಜಕ್ಕೂ ಸಂತೋಷವಾಗಿದೆ. ಇದರಿಂದ ನನ್ನ ಜವಾಬ್ಧಾರಿ ಹೆಚ್ಚಾಗಿದೆ ಎಂದು ಹೇಳಿದ್ದಾರೆ‌

    Post Views: 385

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.