Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬೊಂಡ ಫ್ಯಾಕ್ಟರಿ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥ – ಮುಂದಿನ ಆದೇಶದವರೆಗೆ ಎಳನೀರು, ಆಹಾರೋತ್ಪನ್ನ ಮಾರಾಟ ಮಾಡದಂತೆ ನೋಟಿಸ್
    ಇತ್ತೀಚಿನ ಸುದ್ದಿ

    ಮಂಗಳೂರು: ಬೊಂಡ ಫ್ಯಾಕ್ಟರಿ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥ – ಮುಂದಿನ ಆದೇಶದವರೆಗೆ ಎಳನೀರು, ಆಹಾರೋತ್ಪನ್ನ ಮಾರಾಟ ಮಾಡದಂತೆ ನೋಟಿಸ್

    April 12, 2024
    Share

    ಮಂಗಳೂರು: ನಗರದ ಅಡ್ಯಾರ್ ನಲ್ಲಿರುವ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಇದುವರೆಗೆ 137 ಮಂದಿ ಎಳನೀರು ಕುಡಿದಿರುವುದರಿಂದ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರ ಆಹಾರೋತ್ಪಗಳನ್ನು ಮಾರಾಟ ಮಾಡದಂತೆ ನೋಟೀಸ್ ಜಾರಿಗೊಳಿಸಲಾಗಿದೆ. ಇತ್ತೀಚೆಗೆ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥರಾಗಿದ್ದಾರೆ. ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ 53 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಲ್ಲಿರುವ ಎಲ್ಲರ ಆರೋಗ್ಯವು ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಗುರುವಾರ ಆಹಾರ ಸುರಕ್ಷತೆಯ ಜಿಲ್ಲಾ ಅಂಕಿತ ಅಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ತಂಡ ಮತ್ತೆ ಬೊಂಡ ಫ್ಯಾಕ್ಟರಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದೆ‌. ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರೋತ್ಪಗಳನ್ನು ಮಾರಾಟ ಮಾಡದಂತೆ ನೋಟೀಸ್ ಜಾರಿಗೊಳಿಸಿದೆ. ಅಲ್ಲದೆ ಸದ್ಯ ಫ್ಯಾಕ್ಟರಿಯನ್ನು ಬಂದ್ ಮಾಡಿಸಿದೆ.

    Post Views: 328

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.