Facebook Twitter Instagram
    Tuesday, November 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ- 1,450 ಲೀಟರ್ ಗೋವಾ ಮದ್ಯ ಜಪ್ತಿ
    ಇತ್ತೀಚಿನ ಸುದ್ದಿ

    ಮಂಗಳೂರು: ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ- 1,450 ಲೀಟರ್ ಗೋವಾ ಮದ್ಯ ಜಪ್ತಿ

    November 24, 2026
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಬಕಾರಿ ಇಲಾಖೆ ಅಧಿಕಾರಿಗಳು ಎರಡು ಪ್ರತ್ಯೇಕ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಹಾಗೂ ಸಾಗಾಟ ಮಾಡುತ್ತಿದ್ದ ಗೋವಾ ರಾಜ್ಯದ ಒಟ್ಟು 1,450.340 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

    2026ರ ನವೆಂಬರ್ 23ರಂದು ನಡೆದ ಈ ಕಾರ್ಯಾಚರಣೆಗಳಲ್ಲಿ ಜಪ್ತಿ ಮಾಡಲಾದ ಮದ್ಯ ಹಾಗೂ ವಾಹನಗಳ ಅಂದಾಜು ಒಟ್ಟು ಮೌಲ್ಯ ₹20,37,340 ಎಂದು ಅಬಕಾರಿ ಇಲಾಖೆ ತಿಳಿಸಿದೆ.

    ಮೊದಲ ಪ್ರಕರಣ: ಬಾಳ್ತಿಲದಲ್ಲಿ ₹7.72 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

    ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿ ಎಂಬಲ್ಲಿ ಅಮಿತ್ ಬಿನ್ ಅಣ್ಣು ಪೂಜಾರಿ ಅವರಿಗೆ ಸೇರಿದ ಜಾಗದಲ್ಲಿ ಸಂಪ್ರಿತ್ ಕಾಸರಗೋಡು ಎಂಬಾತನ ಸಹಭಾಗಿತ್ವದಲ್ಲಿ ಗೋವಾ ರಾಜ್ಯದಲ್ಲಿ ತಯಾರಿಸಲಾದ ಮದ್ಯವನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ಲಭಿಸಿತ್ತು.

    ಈ ಮಾಹಿತಿಯ ಮೇರೆಗೆ ಅಬಕಾರಿ ಜಂಟಿ ಆಯುಕ್ತರಾದ ಸಿ. ಜಗದೀಶ್ ಅವರ ನಿರ್ದೇಶನದಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ಬಿಂದುಶ್ರೀ ಪಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

    ಬಂಟ್ವಾಳ ಮತ್ತು ಮಂಗಳೂರು ಉಪ ವಿಭಾಗಗಳ ಅಬಕಾರಿ ಉಪ ಅಧೀಕ್ಷಕರಾದ ಸಂತೋಷ್ ಮೊಡಗಿ ಹಾಗೂ ಗಾಯತ್ರಿ ಸಿ.ಎಚ್. ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಶಿವಣಗಿ ನೇತೃತ್ವದ ತಂಡ ದಾಳಿ ನಡೆಸಿತು.

    ಈ ವೇಳೆ 180 ಮಿಲಿ ಸಾಮರ್ಥ್ಯದ ರಾಯಲ್ ಬ್ಲೂ ಮಾಲ್ಟ್ ವಿಸ್ಕಿಯ 146 ಪೆಟ್ಟಿಗೆಗಳಲ್ಲಿ ಒಟ್ಟು 1,261.440 ಲೀಟರ್ ಗೋವಾ ಮದ್ಯ ಪತ್ತೆಯಾಗಿದ್ದು, ಅಂದಾಜು ₹7,72,340 ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ.

    ಕಾರ್ಯಾಚರಣೆಯಲ್ಲಿ ಅಬಕಾರಿ ಉಪನಿರೀಕ್ಷಕರಾದ ಅಭಿಷೇಕ್ ಬೋರಕರ, ವಿಶಾಲ್ ನಾಯಕ್, ಅಬಕಾರಿ ಪೇದೆಗಳಾದ ಪ್ರಕಾಶ್, ದೊಡ್ಡಪ್ಪ ಹಾಗೂ ವಾಹನ ಚಾಲಕ ಧೀರಜ್ ಪಾಲ್ಗೊಂಡಿದ್ದರು.

    ಎರಡನೇ ಪ್ರಕರಣ: ಎರಡು ಕಾರುಗಳಲ್ಲಿ 188.9 ಲೀಟರ್ ಗೋವಾ ಮದ್ಯ ಅಕ್ರಮ ಸಾಗಾಟ

    ಬಂಟ್ವಾಳ ತಾಲೂಕಿನ ಮೆಲ್ಕಾರ್ ಪ್ರದೇಶದ ಕಲ್ಲಡ್ಕ ಸಮೀಪ ಕೇರಳ ರಾಜ್ಯದ ನೋಂದಣಿ ಹೊಂದಿರುವ ಎರಡು ಕಾರುಗಳಲ್ಲಿ ಯಾವುದೇ ಪರವಾನಗಿ ಅಥವಾ ಅಧಿಕೃತ ದಾಖಲೆಗಳಿಲ್ಲದೆ ಗೋವಾ ರಾಜ್ಯದ ಮದ್ಯವನ್ನು ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಅಬಕಾರಿ ಅಧಿಕಾರಿಗಳಿಗೆ ಲಭಿಸಿತ್ತು.

    ಈ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಎರಡು ಕಾರುಗಳನ್ನು ತಡೆದು ಪರಿಶೀಲಿಸಿದಾಗ, ಕೇರಳ ನೋಂದಣಿಯ ಬಿಳಿ ಮತ್ತು ಕಪ್ಪು ಬಣ್ಣದ ಹುಂಡೈ i20 ಕಾರು (KL-56-R-2927) ಹಾಗೂ ಬಿಳಿ ಬಣ್ಣದ ಮಾರುತಿ ಸುಜುಕಿ ಸ್ವಿಫ್ಟ್ VDI ಕಾರು (KL-14-H-7061)ಗಳಲ್ಲಿ ಮದ್ಯ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

    ಆರೋಪಿಗಳಾದ ಚಂದ್ರಶೇಖರ್ (ಅನ್ನು), ಸಫ್ವಾನ್ ಎಂ. ಹಾಗೂ ಮಹಮ್ಮದ್ ಶಾಫಿನ್ ಅವರು 24 ಪೆಟ್ಟಿಗೆಗಳಲ್ಲಿ 180 ಮಿಲಿ ಸಾಮರ್ಥ್ಯದ ರಾಯಲ್ ಬ್ಲೂ ಮದ್ಯವನ್ನು, ಒಟ್ಟು 188.9 ಲೀಟರ್ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರೆಂದು ತಿಳಿದುಬಂದಿದೆ.

    ಎರಡೂ ಕಾರ್ಯಾಚರಣೆಗಳಲ್ಲಿ ಒಟ್ಟು 1,450.340 ಲೀಟರ್ ಗೋವಾ ಮದ್ಯವನ್ನು ಜಪ್ತಿ ಮಾಡಲಾಗಿದ್ದು, ಮದ್ಯ ಹಾಗೂ ವಾಹನಗಳ ಅಂದಾಜು ಒಟ್ಟು ಮೌಲ್ಯ ₹20,37,340 ಆಗಿದೆ. ಪ್ರಕರಣಗಳ ಕುರಿತು ಅಬಕಾರಿ ಇಲಾಖೆ ಮುಂದಿನ ಕಾನೂನು ಕ್ರಮ ಕೈಗೊಂಡಿದೆ.

    Post Views: 10

    Related Posts

    ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ ನ.27ರಂದು ಅಂತರ್ ಜಿಲ್ಲಾ ಚೆಸ್ ಪಂದ್ಯಾವಳಿ

    November 24, 2026

    ಮಂಗಳೂರು: ಇನ್‌ಸ್ಟಾಗ್ರಾಂ ಜಾಹೀರಾತಿಗೆ ಮರುಳಾದ ಬಾಲಕಿ- ಫೇರ್‌ನೆಸ್ ಕ್ರೀಮ್‌ನಿಂದ ಕಿಡ್ನಿಗೆ ಹಾನಿ

    November 24, 2026

    ಮಂಗಳೂರಿನಲ್ಲಿ ರಾತ್ರಿ 11.45ರ ವರೆಗೆ ಹೋಟೆಲ್‌ ತೆರೆಯಲು ಅವಕಾಶ- ಸುಧೀರ್ ಕುಮಾರ್ ರೆಡ್ಡಿ

    November 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ ನ.27ರಂದು ಅಂತರ್ ಜಿಲ್ಲಾ ಚೆಸ್ ಪಂದ್ಯಾವಳಿ

    November 24, 2026

    ಮಂಗಳೂರು: ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ- 1,450 ಲೀಟರ್ ಗೋವಾ ಮದ್ಯ ಜಪ್ತಿ

    November 24, 2026

    ಮಂಗಳೂರು: ಇನ್‌ಸ್ಟಾಗ್ರಾಂ ಜಾಹೀರಾತಿಗೆ ಮರುಳಾದ ಬಾಲಕಿ- ಫೇರ್‌ನೆಸ್ ಕ್ರೀಮ್‌ನಿಂದ ಕಿಡ್ನಿಗೆ ಹಾನಿ

    November 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.