Facebook Twitter Instagram
    Thursday, October 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಗಸ್ಟ್ 7 ಮತ್ತು 8ರಂದು 16ನೇ ಆವೃತ್ತಿಯ ಆಳ್ವಾಸ ಪ್ರಗತಿ 2026
    ಇತ್ತೀಚಿನ ಸುದ್ದಿ

    ಆಗಸ್ಟ್ 7 ಮತ್ತು 8ರಂದು 16ನೇ ಆವೃತ್ತಿಯ ಆಳ್ವಾಸ ಪ್ರಗತಿ 2026

    July 30, 2026
    Share

    16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್‌ನ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ.

    16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ 2026ರಲ್ಲಿ ಐಟಿ, ಐಟಿಐ‌ಎಸ್, ಉತ್ಪಾದನಾ ವಲಯ, ಆರೋಗ್ಯ ಮತ್ತು ಔಷಧ, ಬ್ಯಾಂಕಿಂಗ್ ಮತ್ತು ಹಣಕಾಸು, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆತಿಥ್ಯ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ ಹಾಗೂ ನಿರ್ಮಾಣ ಕ್ಷೇತ್ರಗಳ 320 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

    2026ರ ಶೈಕ್ಷಣಿಕ ವರ್ಷದಲ್ಲಿ ಅಥವಾ ಅದಕ್ಕೂ ಮೊದಲು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು, ಎಸ್ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ನರ್ಸಿಂಗ್, ವೈದ್ಯಕೀಯ, ಪ್ಯಾರಾ ಮೆಡಿಕಲ್, ಬಿಬಿಎ, ಎಂಬಿಎ ಸೇರಿದಂತೆ ಎಲ್ಲ ವಿಭಾಗದವರು ಭಾಗವಹಿಸಬಹುದು. ಹೊರ ಜಿಲ್ಲೆಗಳಿಂದ ಬರುವ ಅಭ್ಯರ್ಥಿಗಳಿಗೆ ಆ.6ರಂದು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕಾಪು, ಬ್ರಹ್ಮಾವರ, ಬೈಂದೂರು, ಬಂಟ್ವಾಳ, ಪುತ್ತೂರು ಹಾಗೂ ಸುಬ್ರಹ್ಮಣ್ಯದಲ್ಲಿ ವಿಶೇಷ ಓರಿಯೆಂಟೇಶನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಈವರೆಗೆ 40,848 ಮಂದಿ ಸ್ಥಳದಲ್ಲೇ ಉದ್ಯೋಗ ಪಡೆದು ವೃತ್ತಿಜೀವನಕ್ಕೆ ಭದ್ರ ಅಡಿಪಾಯ ಹಾಕಿಕೊಂಡಿದ್ದಾರೆ. 66,432 ಅಭ್ಯರ್ಥಿಗಳು ಶಾರ್ಟ್‌ ಲಿಸ್ಟ್‌ ಆಗಿ ಮುಂದಿನ ಹಂತದ ಆಯ್ಕೆಯಾಗಿದ್ದಾರೆ. ಮಾಹಿತಿಗೆ www.alvaspragati.com ಅಥವಾ ಮೊಬೈಲ್ ಫೋನ್ ಸಂಖ್ಯೆ 9611750531 / 9741440490 ಅನ್ನು ಸಂಪರ್ಕಿಸಬಹುದು. ಆನ್‌ಲೈನ್ ನೋಂದಣಿ ಕಡ್ಡಾಯವಾಗಿದ್ದು, https://alvaspragati.com/candidate-registration ಈ ತಾಣದಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9611750531 / 9741440490 / 9008907716 / 7975223865

    ಸೂಚನೆ: ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಾವಣೆ ಮಾಡಿಕೊಳ್ಳಬೇಕು.

    ಪತ್ರಿಕಾಗೋಷ್ಠಿಯಲ್ಲಿ ಶ್ರೀ ವಿವೇಕ ಆಳ್ವ, ಟ್ರಸ್ಟಿಗಳು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ, ಶ್ರೀ ಪ್ರಸಾದ ಶೆಟ್ಟಿ, ಮುಖ್ಯಸ್ಥರು, ಪತ್ರಿಕೋದ್ಯಮ ವಿಭಾಗ, ಆಳ್ವಾಸ್ ಸ್ವಾಯತ್ತಾ ಕಾಲೇಜು, ಕುಮಾರಿ ರಂಜಿತಾ ಆಚರ‍್ಯ, ಮುಖ್ಯಸ್ಥರು, ಪ್ಲೇಸ್‌ಮೆಂಟ್ ವಿಭಾಗ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ ಭಾಗವಹಿಸಿದರು.

    Post Views: 102

    Related Posts

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.