Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಫೇಸ್‌ಬುಕ್‌ನಲ್ಲಿ ಅಶ್ಲೀಲ ಪೋಸ್ಟ್‌- ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಫೇಸ್‌ಬುಕ್‌ನಲ್ಲಿ ಅಶ್ಲೀಲ ಪೋಸ್ಟ್‌- ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲು

    July 14, 2025
    Share

    ಬೆಳ್ತಂಗಡಿ: ಸೌಜನ್ಯ ಹೋರಾಟಗಾರರು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.

    ಮೊದಲೇ ಪ್ರಕರಣದಲ್ಲಿ ಕಡಬ ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ (46) ಎಂಬವರು ನೀಡಿದ ದೂರಿನಂತೆ ದಿನಾಂಕ:11-07-2025 ರಂದು ಪ್ರವೀಣ್‌ ಲೊಬೋ ಎಂಬ ಪೇಸ್ ಬುಕ್‌ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 58/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

    ಇನ್ನೊಂದು ಪ್ರಕರಣದಲ್ಲಿ ಧರ್ಮಸ್ಥಳ ಗ್ರಾಮದ ನಿವಾಸಿ ಚೇತನ್‌ ಎನ್‌ (28) ಎಂಬವರ ದೂರಿನಂತೆ ದಿನಾಂಕ: 11-07-2025 ರಂದು ಮೊಬೈಲ್ ನಲ್ಲಿ ತನ್ನ ಫೇಸ್ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಡಾಕ್ಟರ್ ವರ್ಮಾ ಎಂಬ ಪೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದ ಧಾರ್ಮಿಕ ಶ್ರಧ್ದಾಕೆಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಹಾಗೂ ಆಶ್ಲೀಲವಾಗಿ ಚಿತ್ರಿಸಿರುವ ಭಾವಚಿತ್ರವನ್ನು ಪೋಸ್ಟ್ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ : 59/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

    Post Views: 133

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.