Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
    ಇತ್ತೀಚಿನ ಸುದ್ದಿ

    ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

    June 13, 2024
    Share

    ಉಡುಪಿ:  2023ರ ಜುಲೈ ತಿಂಗಳಲ್ಲಿ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೊ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೊಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ.

    ಬೈಂದೂರು ನಿವಾಸಿ ಮಧುಕರ ಮರಾಠಿ(24) ಶಿಕ್ಷೆಗೆ ಗುರಿಯಾದ ಆರೋಪಿ. ನೊಂದ ಬಾಲಕಿಯು ಆರೋಪಿಯ ಸಂಬಂಧಿಕನಾಗಿದ್ದು, ತನ್ನ ಮನೆಗೆ ಬಂದ ನೊಂದ ಬಾಲಕಿಯನ್ನು ಮಧುಕರ ಮರಾಠಿ ಬೆದರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ವಿಚಾರ ಬೇರೆಯವರಲ್ಲಿ ಹೇಳಿದರೆ ನಿನ್ನ ಬಗ್ಗೆ ಅಪ್ರಚಾರ ಮಾಡುವುದಾಗಿ ಆತ ಬಾಲಕಿಗೆ ಬೆದರಿಕೆಯೊಡ್ಡಿದ್ದನು.

    ನಂತರ ಮಧುಕರ, ಯಾರು ಇಲ್ಲದ ಸಮಯ ಆಕೆಯ ಮನೆಗೆ ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ವಿಚಾರವನ್ನು  ಯಾರಲ್ಲಿಯೂ ಕೂಡ ಹೇಳದಂತೆ ಬೆದರಿಕೆಯೊಡ್ಡಿದ್ದನು ಎಂದು ದೂರಲಾಗಿದೆ. ನಂತರ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಮನೆಯವರು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಆಕೆ ಗರ್ಭಿಣಿ ಆಗಿದ್ದಾಳೆ ಎನ್ನುವುದು ತಿಳಿದು ಬಂದಿದೆ. ಈ ಬಗ್ಗೆ ವೈದ್ಯರು ಪೊಲೀಸ್ ಠಾಣೆಗೆ ಸೂಕ್ತ ಕ್ರಮಕ್ಕಾಗಿ ಮಾಹಿತಿ ನೀಡಿದ್ದರು.

    ಈ  ವಿಚಾರ ತಿಳಿದ ಬಾಲಕಿಯ ತಾಯಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದರು.   ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತೃತೇಜ್ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 

    ನ್ಯಾಯಾಲಯ ಒಟ್ಟು 30 ಸಾಕ್ಷಿಗಳ ಪೈಕಿ 15 ಸಾಕ್ಷಿಗಳ ವಿಚಾರಣೆ ನಡೆಸಿದ್ದು, ನೊಂದ ಬಾಲಕಿಯ ಸಾಕ್ಷಿ ಮತ್ತು ಡಿಎನ್‌ಎ ವರದಿಯಲ್ಲಿ ಆರೋಪಿಯು ನೊಂದ ಬಾಲಕಿಯ ಗರ್ಭಕ್ಕೆ ಕಾರಣವಾಗಿರುವ ಪೂರಕ ಸಾಕ್ಷಿ ಯನ್ನು ಪರಿಗಣಿಸಿ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

    ಅದರಂತೆ ಆರೋಪಿಗೆ 20ವರ್ಷ ಕಠಿಣ ಜೈಲುಶಿಕ್ಷೆ, 31ಸಾವಿರ ರೂ. ದಂಡ ವಿಧಿಸಲಾಗಿದ್ದು, ದಂಡದಲ್ಲಿ 11ಸಾವಿರ ರೂ. ಸರಕಾರಕ್ಕೆ ಮತ್ತು 20ಸಾವಿರ ರೂ. ಸಂತ್ರಸ್ತ ಬಾಲಕಿಗೆ ಮತ್ತು ಸರಕಾರದಿಂದ 2ಲಕ್ಷ ರೂ. ಪರಿಹಾರ ನೀಡಬೇಕೆಂದು ಎಂದು ನ್ಯಾಯಾಲಯ ಆದೇಶ ನೀಡಿದೆ. 

    ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು. 2023ರ ಸೆಪ್ಟೆಂಬರ್‌ನಲ್ಲಿ ಪ್ರಕರಣದ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಒಂದೇ ವರ್ಷದೊಳಗೆ ನ್ಯಾಯಾಲಯ ಆದೇಶ ನೀಡಿದೆ.

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.