Facebook Twitter Instagram
    Sunday, May 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ- ಆರೋಪಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ಮತ್ತು ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ- ಆರೋಪಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ಮತ್ತು ದಂಡ

    March 12, 2026
    Share

    ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪಿ ಅಬೂಬಕರ್ (53) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೊಕ್ಸ್‌-ಎಫ್‌ಟಿಎಸ್‌ಸಿ 2) ನ್ಯಾಯಾಧೀಶ ಮಾನು ಕೆ.ಎಸ್. ಅವರು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ.

    2025ರ ಮಾ.29ರಂದು ಅಬೂಬಕ‌ರ್ ತನ್ನ ನೆರೆಮನೆಯ ಬಾಲಕಿಯನ್ನು ಮನೆಯೊಳಗೆ ಒಬ್ಬಳಿದ್ದಾಗ ಎಳೆದೊಯ್ದು ಯಾರೂ ವಾಸವಿಲ್ಲದ ಮನೆಯೊಂದರ ಬಳಿ ಅತ್ಯಾಚಾರಗೈದಿದ್ದ. ಅದಕ್ಕೂ ಮುನ್ನ ಈತನು 3 ಬಾರಿ ಆಕೆಯನ್ನು ಅತ್ಯಾಚಾರಗೈದಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಇನ್‌ಸ್ಪೆಕ್ಟರ್‌ ಶಿವಕುಮಾರ್ ಬಿ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಧೀಶರು ಬಿಎನ್‌ಎಸ್ ಕಲಂ 64(1) ಹಾಗೂ ಪೊಕ್ಸ್ ಕಾಯ್ದೆಯ ಕಲಂ 6 ರಡಿ ಆರೋಪಿಗೆ 20 ವರ್ಷಗಳ ಕಠಿಣ ಸಜೆ ಹಾಗು 45,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 4 ತಿಂಗಳು ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

    ಬಿಎನ್‌ಎಸ್ ಕಲಂ 351(2) ನಡಿ 3 ತಿಂಗಳ ಸಾದಾ ಸಜೆ ಮತ್ತು 5,000 ರೂ.ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 15 ದಿನ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.ಸಂತ್ರಸ್ತೆಗೆ ದಂಡದ ಮೊತ್ತ 50,000 ರೂ. ಹಾಗೂ ಪ್ರತ್ಯೇಕವಾಗಿ 3.50 ಲಕ್ಷ ರೂ. ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪೊಕ್ಸ್ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೆಂಗಳೂರು ವಾದಿಸಿದ್ದರು.

    Post Views: 116

    Related Posts

    ಲಿವ್-ಇನ್ ಸಂಬಂಧ ದುರಂತ ಅಂತ್ಯ: ಮಹಿಳೆಯ ಕಿರುಕುಳ ಆರೋಪ, ಯುವಕ ಆತ್ಮಹತ್ಯೆ

    May 9, 2026

    ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

    May 9, 2026

    ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ: ಬಿಇಡಿ ಮೌಲ್ಯಮಾಪನ ಅಕ್ರಮ ತನಿಖೆ ನಡುವೆ ಆತಂಕ

    May 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.