Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ರೇ ಗಲ್ಲು, ಗ್ಯಾಂಗ್ ರೇಪ್ ಮಾಡಿದವರಿಗೆ 20 ವರ್ಷ ಶಿಕ್ಷೆ – ಅಮಿತ್ ಶಾ
    ಇತ್ತೀಚಿನ ಸುದ್ದಿ

    ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ರೇ ಗಲ್ಲು, ಗ್ಯಾಂಗ್ ರೇಪ್ ಮಾಡಿದವರಿಗೆ 20 ವರ್ಷ ಶಿಕ್ಷೆ – ಅಮಿತ್ ಶಾ

    August 11, 2023
    Share

    ನವದೆಹಲಿ: ಕೇಂದ್ರ ಸರ್ಕಾರದಿಂದ ದೇಶದಲ್ಲಿನ ಗ್ಯಾಂಗ್ ರೇಪ್ ನಂತಹ ಪ್ರಕರಣ ತಡೆಗಟ್ಟೋದಕ್ಕಾಗಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಈ ನಿಟ್ಟಿನಲ್ಲಿ ಲೋಕಸಭೆಯಲ್ಲಿ ತಿದ್ದುಪಡಿ ಮಸೂಧೆಯನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದಾರೆ. ಈ ತಿದ್ದುಪಡಿ ಮಸೂದೆಯಂತೆ ಇನ್ಮುಂದೆ ಗ್ಯಾಂಗ್ ರೇಪ್ ಮಾಡಿದವರಿಗೆ 20 ವರ್ಷ ಶಿಕ್ಷೆ ವಿಧಿಸುವಂತ ಕಾನೂನು ಜಾರಿಯಾಗಲಿದೆ.

    ಈ ಸಂಬಂಧ ಸಂಸತ್ ಮುಂಗಾರು ಅಧಿವೇಶನದ ಕೊನೆಯ ದಿನದಂದು ಲೋಕಸಭೆಯಲ್ಲಿ ಅಪರಾಧ ಕಾನೂನು ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು.

    ಈ ವೇಳೆ ಮಾತನಾಡಿದ ಅವರು, ನಾನು ಇಂದು ಮಂಡಿಸುತ್ತಿರುವ ಮೂರು ಮಸೂದೆಗಳಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಮೂಲ ಕಾನೂನು ಸೇರಿದೆ. ಮೊದಲನೆಯದು 1860 ರಲ್ಲಿ ರೂಪುಗೊಂಡ ಭಾರತೀಯ ದಂಡ ಸಂಹಿತೆ, ಎರಡನೆಯದು 1898 ರಲ್ಲಿ ರೂಪುಗೊಂಡ ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಮೂರನೆಯದು 1872 ರಲ್ಲಿ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆ. ಬ್ರಿಟಿಷರು ತಂದ ಈ ಕಾನೂನುಗಳನ್ನು ನಾವು ಇಂದು ಕೊನೆಗೊಳಿಸುತ್ತೇವೆ ಎಂದರು.

    ಅಪರಾಧ ಕಾನೂನು ತಿದ್ದುಪಡಿ ಕಾಯ್ದೆಯನ್ನು ಮಂಡಿಸಲಾಗಿದೆ. ಈ ಕಾಯ್ದೆಯಲ್ಲಿ ಹಳೇ ಅಂಶಗಳನ್ನು ತೆಗೆದು ಹೊಸ ಅಂಶ ಸೇರಿಸಲಾಗಿದೆ ಎಂದರು.

    ತಿದ್ದುಪಡಿ ಕಾಯ್ದೆಯಂತೆ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದರೇ ಗಲ್ಲುಶಿಕ್ಷೆ ವಿಧಿಸೋದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗ್ಯಾಂಗ್ ರೇಪ್ ಮಾಡಿದವರಿಗೆ 20 ವರ್ಷ ಶಿಕ್ಷೆ ವಿಧಸಲಾಗುತ್ತದೆ. 20 ವರ್ಷ ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.

    Post Views: 369

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.