Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಆಮಿಷವೊಡ್ಡಿ 289 ಮಂದಿಗೆ ಕೋಟ್ಯಂತರ ರೂ. ವಂಚನೆ- ಇಬ್ಬರು ಆರೋಪಿಗಳ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಆಮಿಷವೊಡ್ಡಿ 289 ಮಂದಿಗೆ ಕೋಟ್ಯಂತರ ರೂ. ವಂಚನೆ- ಇಬ್ಬರು ಆರೋಪಿಗಳ ಸೆರೆ

    July 7, 2025
    Share

    ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡುವುದಾಗಿ ಆಮಿಷವೊಡ್ಡಿ 289 ಮಂದಿಯಿಂದ ಕೋಟ್ಯಂತರ ರೂ. ವಂಚಿಸಿದ ಮುಂಬೈ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಮುಂಬೈಯ ದಿಲ್ಶಾದ್ ಅಬ್ದುಲ್ ಸತ್ತಾರ್ ಖಾನ್ (45) ಮತ್ತು ಸಾಹುಕಾರಿ ಕಿಶೋರ್ ಕುಮಾರ್ ಯಾನೆ ಅನಿಲ್ ಪಾಟೀಲ್ (34)ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಪೊಲೀಸರು ಮುಂಬೈ ಮೂಲದ ಮಸೀವುಲ್ಲಾ ಖಾನ್ ಎಂಬಾತನನ್ನು ಬಂಧಿಸಿದ್ದಾರೆ. ಆತನೀಗ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    *ಪ್ರಕರಣದ ವಿವರ: ನಗರ ಬೆಂದೂರ್ ವೆಲ್ ಎಂಬಲ್ಲಿ ಕಚೇರಿಯೊಂದನ್ನು ತೆರೆದಿದ್ದ ಆರೋಪಿಗಳು ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿಸಿ ಬಳಿಕ 289 ಮಂದಿಯಿಂದ ಒಟ್ಟು 4.50 ಕೋಟಿ ರೂ. ಪಡೆದು ವೀಸಾ ಕೊಡದೆ ವಂಚಿಸಿದ್ದರು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    Post Views: 163

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.