Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಅಪರಾಧಿಗೆ 3 ವರ್ಷ ಸಾದಾ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಅಪರಾಧಿಗೆ 3 ವರ್ಷ ಸಾದಾ ಶಿಕ್ಷೆ

    March 1, 2023
    Share

    ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ಮತ್ತು ಎಫ್ ಟಿಎಸ್ಸಿ-1 (ಪೊಕ್ಸೊ) ನ್ಯಾಯಾಲಯ ಮೂರು ವರ್ಷ ಸಾದಾ ಶಿಕ್ಷೆ ವಿಧಿಸಿದೆ. ಬಜ್ಜೆ ನಿವಾಸಿ ಅಬ್ದುಲ್ ಹಮೀದ್ (50) ಶಿಕ್ಷೆಗೊಳಗಾದ ಅಪರಾಧಿ. ಅಬ್ದುಲ್ ಹಮೀದ್ 2021ರ ಜೂ.3ರಂದು ನೆರೆಮನೆಯ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಬಜ್ಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ರಾಘವೇಂದ್ರ ನಾಯ್ಕ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮತ್ತು ಎಫ್ಟಿಎಸ್ಸಿ-1(ಪೊಕ್ಸೊ) ನ್ಯಾಯಾಲಯದಲ್ಲಿ ಈತನ ಮೇಲಿದ್ದ ಆರೋಪ ಸಾಬೀತಾಗಿತ್ತು. ಈ ಹಿನ್ನಲೆಯಲ್ಲಿ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅಪರಾಧಿ ಅಬ್ದುಲ್ ಹಮೀದ್ಗೆ ಪೊಕ್ಸೊ ಕಾಯ್ದೆಯ ಕಲಂ 8ರಡಿ 3 ವರ್ಷ ಸಾದಾ ಸಜೆ ಮತ್ತು 5,000 ರೂ. ದಂಡ, ಐಪಿಸಿ ಸೆಕ್ಷನ್ 448ರಡಿ 6 ತಿಂಗಳ ಸಾದಾ ಸಜೆ, ಕಲಂ 354ರಡಿ 1 ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ, ಐಪಿಸಿ ಸೆಕ್ಷನ್ 323ರಡಿ 6 ತಿಂಗಳ ಸಾದಾ ಸಜೆ ಮತ್ತು 1,000 ರೂ. ದಂಡ, ಐಪಿಸಿ ಸೆಕ್ಷನ್ 506ರಡಿ 1 ವರ್ಷ ಸಾದಾ ಸಜೆ ಹಾಗೂ 1,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು.

    Post Views: 171

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.