Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಅಕ್ರಮ ಮರಳು ಸಾಗಾಟ : 4 ದೋಣಿಗಳು ವಶಕ್ಕೆ…!!
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಕ್ರಮ ಮರಳು ಸಾಗಾಟ : 4 ದೋಣಿಗಳು ವಶಕ್ಕೆ…!!

    March 21, 2024
    Share

    ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಗತೋಟದಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಹೊಳೆಯಲ್ಲಿ ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಸಮುದ್ರ ತೀರದಿಂದ ನಿತ್ಯವೂ ಅಕ್ರಮವಾಗಿ ಮರಳು ತೆಗೆದು ನಾಡ ದೋಣಿಗಳ ಮೂಲಕ ಹೊಳೆಯಲ್ಲಿ ಸಾಗಾಟ ನಡೆಸಿ ನಾಗತೋಟ ನಿವಾಸಿ ಮಹಮ್ಮದ್‌ ಆಲಿ ಅವರ ಖಾಸಗಿ ಜಮೀನಿನಲ್ಲಿ ದಾಸ್ತಾನು ಇರಿಸಲಾಗುತ್ತಿತ್ತು.ಈ ಮರಳನ್ನು ಮಧ್ಯ ರಾತ್ರಿ ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿತ್ತು. ಈ ಮರಳು ಮಾಫಿಯಾ ಬಗ್ಗೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಉಳ್ಳಾಲ ಠಾಣೆಗೆ ದೂರು ನೀಡಿದ್ದರೂ ಅಕ್ರಮ ಮರಳುಗಾರಿಕೆಗೆ ಕಡಿವಾಣ ಬಿದ್ದಿರಲಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ದೂರು ನೀಡಿದ್ದು, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮರಳು ಅಡ್ಡೆಗೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

    ಸಿಸಿಬಿ ಪೊಲೀಸರೊಂದಿಗೆ ಗಣಿ, ಭೂ ವಿಜ್ಞಾನ ಅಧಿಕಾರಿಗಳ ತಂಡ ಬುಧವಾರ ನಾಗತೋಟದ ಅಕ್ರಮ ಮರಳು ಅಡ್ಡೆಗೆ ದಿಢೀರ್‌ ದಾಳಿ ನಡೆಸಿದ ಬಳಿಕ ಉಳ್ಳಾಲ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಐವರು ತಲೆಮರೆಸಿಕೊಂಡಿದ್ದಾರೆ.

    ವಶ ಪಡಿಸಿಕೊಳ್ಳಲಾದ ಅಪಾರ ಪ್ರಮಾಣದ ಮರಳು ಮತ್ತು ನಾಡ ದೋಣಿಗಳನ್ನು ಪೊಲೀಸರು ಭೂ ಮತ್ತು ಗಣಿ ವಿಜ್ಞಾನ ಇಲಾಖಾಧಿರಿಗಳಿಗೆ ಹಸ್ತಾಂತರಿಸಿದ್ದಾರೆ. ಅಕ್ರಮ ಮರಳನ್ನು ದಾಸ್ತಾನು ಇರಿಸಲು ಸಹಕರಿಸುತ್ತಿರುವವರ ಜಮೀನನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸ್ಥಳೀಯರು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

    Post Views: 250

    Related Posts

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.