Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕುಖ್ಯಾತ ಅಂತರ್ ಜಿಲ್ಲಾ ಮನೆಗಳ್ಳತನ ಆರೋಪಿಯ ಬಂಧನ; 46.67 ಲಕ್ಷ ಮೌಲ್ಯದ ಸೊತ್ತು ವಶ
    ಇತ್ತೀಚಿನ ಸುದ್ದಿ

    ಉಡುಪಿ: ಕುಖ್ಯಾತ ಅಂತರ್ ಜಿಲ್ಲಾ ಮನೆಗಳ್ಳತನ ಆರೋಪಿಯ ಬಂಧನ; 46.67 ಲಕ್ಷ ಮೌಲ್ಯದ ಸೊತ್ತು ವಶ

    November 1, 2023
    Share

    ಉಡುಪಿ: ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ ಅ.8ರಂದು ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲ್ದಾಸ್ ನಾಯಕ್ ಅವರ ಮನೆಯ ಬಾಗಿಲು ಮುರಿದು, ಬೆಡ್ ರೂಮ್ ನ ಅಲ್ಮೇರಾದಲ್ಲಿದ್ದ ಸುಮಾರು 66,36,300 ರೂ. ಮೌಲ್ಯದ ಅಂದಾಜು 1882 ಗ್ರಾಂ ತೂಕದ ಚಿನ್ನಾಭರಣ ಹಾಗೂ 6,70,500 ರೂ. ಮೌಲ್ಯದ 7,450 ಗ್ರಾಂ ತೂಕದ ಬೆಳ್ಳಿಯ ಸೊತ್ತುಗಳು ಸಹಿತ ಒಟ್ಟು 73,06,800 ಮೌಲ್ಯದ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದನು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗಾಗಿ ಪಿಎಸ್ ಐ ಪುನೀತ್ ಕುಮಾರ್ ಬಿ.ಇ. ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಕಾರ್ಯಾಚರಣೆಗೆ ಇಳಿದ ಪೊಲೀಸರು ಅ.31ರಂದು ಉಡುಪಿ ಬಲಾಯಿಪಾದೆಯ ಜಂಕ್ಷನ್ ಬಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಒಟ್ಟು 31,55,930 ರೂ. ಮೌಲ್ಯದ 530.909 ಗ್ರಾಪಂ ತೂಕದ ಚಿನ್ನಾಭರಣ ಹಾಗೂ 15,12,000 ರೂ. ಮೌಲ್ಯದ 16.800 ಕೆ.ಜಿ. ತೂಕದ ಬೆಳ್ಳಿಯ ಸೊತ್ತುಗಳು ಮತ್ತು ಕಳ್ಳತನಕ್ಕೆ ಬಳಸಿದ್ದ 2,50,000 ಮೌಲ್ಯದ ಈಕೊ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಬ್ರಹ್ಮಾವರ, ತರೀಕೆರೆ, ಅರಸೀಕೆರೆ ಮತ್ತು ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿಯೂ ಕೂಡ ಭಾಗಿಯಾಗಿದ್ದಾನೆ. ಅಲ್ಲದೆ, ಈತನ ವಿರುದ್ಧ ಈಗಾಗಲೇ ಬೆಂಗಳೂರು, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 60ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.

    Post Views: 187

    Related Posts

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.