Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: SSLC ವಿದ್ಯಾರ್ಥಿನಿಗೆ ಲೈಂಕಿಕ ದೌರ್ಜನ್ಯವೆಸಗಿದ ಪ್ರಕರಣ : ಆರೋಪಿಗೆ 5 ವರ್ಷ ಸಜೆ
    ಇತ್ತೀಚಿನ ಸುದ್ದಿ

    ಮಂಗಳೂರು: SSLC ವಿದ್ಯಾರ್ಥಿನಿಗೆ ಲೈಂಕಿಕ ದೌರ್ಜನ್ಯವೆಸಗಿದ ಪ್ರಕರಣ : ಆರೋಪಿಗೆ 5 ವರ್ಷ ಸಜೆ

    March 5, 2025
    Share

    ಮಂಗಳೂರು: ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 (ಪೋಕ್ಸೋ ನ್ಯಾಯಾಲಯ) ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಮೂಡುಬಿದಿರೆ ಪಡುಮಾರ್ನಾಡು ಕೆಸರುಗದ್ದೆ ನಿವಾಸಿ ಆಸಿಫ್ (43) ಶಿಕ್ಷೆಗೊಳಗಾದ ಆರೋಪಿ.

    ಆಸಿಫ್‌ಗೆ ಐಪಿಸಿ-341 ರಡಿ 1 ತಿಂಗಳ ಸಾದಾ ಸಜೆ, ಐಪಿಸಿ 354ರಡಿ 5 ವರ್ಷ ಸಾದಾ ಸಜೆ ಮತ್ತು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಸಾದಾ ಸಜೆ, ಐಪಿಸಿ 323ರಡಿ 1ವರ್ಷ ಸಾದಾ ಸಜೆ, ಸೆಕ್ಷನ್ 12 ಪೋಕ್ಸೋದಡಿ 3 ವರ್ಷ ಸಾದಾ ಸಜೆ ಹಾಗೂ 10ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

    2019ರ ಫೆ.10ರಂದು ಸಂಜೆ ಮಾರ್ಪಾಡಿ ಜೈನ್‌ಪೇಟೆ ಸಮೀಪದ ಹೈಸ್ಕೂಲೊಂದರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸ್ಪೆಷಲ್ ಕ್ಲಾಸ್ ಮುಗಿಸಿ ತನ್ನ ಸಹಪಾಠಿ ಜತೆ ನಿಂತಿದ್ದಳು. ಈ ಸಂದರ್ಭ ವಿದ್ಯಾರ್ಥಿನಿಯ ತಾಯಿ ನೆರೆಮನೆಯ ಯುವಕನ ಜತೆ ತನ್ನ ಮಗಳನ್ನು ಬೈಕ್‌ನಲ್ಲಿ ಕರೆದುಕೊಂಡು ಬರಲು ಹೇಳಿದ ಕಾರಣ ಆತ ಬೈಕ್‌ನಲ್ಲಿ ಬಂದು ವಿದ್ಯಾರ್ಥಿನಿ ಬಳಿ ನಿಲ್ಲಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಮತ್ತು ಆಕೆಯ ಸಹಪಾಠಿ ಬೈಕ್‌ನಲ್ಲಿ ತೆರಳಲು ಅಣಿಯಾಗುತ್ತಿದ್ದಾಗ ವಿದ್ಯಾರ್ಥಿನಿಯ ದೂರದ ಸಂಬಂಧಿ ಆರೋಪಿ ಆಸಿಫ್ ತಡೆದು ನಿಲ್ಲಿಸಿ, ಬೈದು, ವಿದ್ಯಾರ್ಥಿನಿಯ ಕೆನ್ನೆಗೆ ಹೊಡೆದು ಮಾನಹಾನಿ ಮಾಡಿದ್ದಾನೆ. ಬಳಿಕ ಆಕೆಗೆ ಲೈಂಗಿಕ ಕಿರುಕುಳ ನೀಡಿ ಎಳೆದಾಡಿದ್ದಾನೆ. ಇದಾದ ಬಳಿಕ ಬೈಕ್‌ನಲ್ಲಿ ಬಂದ ಯುವಕನನ್ನು ದೂಡಿ, ಹಲ್ಲೆಗೈದಿದ್ದಾನೆ ಎಂದು ಆರೋಪಿಸಲಾಗಿತ್ತು.

    ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಗ್ಗೆ ಸಮಗ್ರ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಜಯ್ ದೇವರಾಜ್ ಅವರು ತೀರ್ಪು ನೀಡಿದ್ದಾರೆ.

    ದಂಡದ 20ಸಾವಿರ ರೂ. ಮೊತ್ತದಲ್ಲಿ 10ಸಾವಿರ ರೂ. ವಿದ್ಯಾರ್ಥಿನಿಗೆ ಪರಿಹಾರ ನೀಡಬೇಕು ಮತ್ತು ಅಪ್ರಾಪ್ತ ವಿದ್ಯಾರ್ಥಿನಿಗೆ ಕಾನೂನು ಸೇವಾ ಪ್ರಾಧಿಕಾರ 1ಲಕ್ಷ ರೂ. ಪರಿಹಾರ ನೀಡಬೇಕೆಂದು ನ್ಯಾಯಾಲಯ ನಿರ್ದೇಶ ನೀಡಿದೆ. ಮೂಡುಬಿದಿರೆ ಈ ಹಿಂದಿನ ಇನ್‌ಸ್ಪೆಕ್ಟರ್ ದೇಜಪ್ಪ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಸರಕಾರದ ಪರವಾಗಿ ವಾದಿಸಿದ್ದರು.

    ಆರೋಪಿ ವಿರುದ್ಧ ಮಂಗಳೂರು ಮಹಿಳಾ ಠಾಣೆಯಲ್ಲಿ 2 ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಉರ್ವ ಪೊಲೀಸ್ ಠಾಣೆಯಲ್ಲಿ 1ಪ್ರಕರಣ, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 1ಪ್ರಕರಣ ದಾಖಲಾಗಿದೆ. ಅತ್ಯಾಚಾರ, ಮಾದಕ ಸೇವನೆ ಮತ್ತು ಮಾರಾಟ ಪ್ರಕರಣದಲ್ಲೂ ಈತ ಭಾಗಿಯಾಗಿದ್ದು, ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಆರೋಪಿ ನಾನಾ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

    Post Views: 185

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.