ಮಂಗಳೂರು: ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿದರೆ 500% ಲಾಭಾಂಶ ಬರುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 46 ಲಕ್ಷ ರೂ. ವಂಚಿಸಿರುವ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ವ್ಯಕ್ತಿಯ ವಾಟ್ಸ್‌ಆ್ಯಪ್‌ಗೆ ಶ್ರದ್ಧಾ ಬೆಲಾನಿ ಎಂಬ ಅಪರಿಚಿತಳು ARES MANAGEMENT CORPORATION ಪರವಾಗಿ ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿದರೆ 500% ಲಾಭಾಂಶ ಬರುವುದಾಗಿ ನಂಬಿಸಿದ್ದಳು. ಅದರಂತೆ https://play.google.someco.shop/com.rehvu.dqlgdf/install.html ಎಂಬ ಲಿಂಕ್ ಒತ್ತಿ ರಿಜಿಸ್ಟ್ರೇಷನ್ ಮಾಡಿಕೊಂಡಿದ್ದರು. ಬಳಿಕ ಅವರು H 777 ARES Stock Exchange Group ಎಂಬ ವಾಟ್ಸಾಪ್ ಗ್ರೂಪ್‌ಗೆ ಸೇರಿಸಿದ್ದರು. ಗ್ರೂಪ್‌ನಲ್ಲಿ ಶ್ರದ್ಧಾ ಬೆಲಾನಿ ಗ್ರೂಪ್ ಅಡ್ಮಿನ್ ಆಗಿದ್ದು, ಈ ಟ್ರೇಡ್‌ನಲ್ಲಿ ಅಭಿಷೇಕ್ ರಾಮ್ ಜೀ ಚೀಫ್ ಆಗಿರುತ್ತಾರೆ. ಮೊದಲಿಗೆ ಸ್ಟಾಕ್ ಪರ್ಚೇಸ್ ಮಾಡಲು ತನ್ನ ಬ್ಯಾಂಕ್‌ನಿಂದ 2 ಲಕ್ಷ ಹಣವನ್ನು ಆರ್‌ಟಿಜಿಎಸ್ ಮಾಡಿದ್ದರು. ಮರುದಿನ ಆ ಸ್ಟಾಕ್‌ನ್ನು ಸೇಲ್ ಮಾಡಿದ್ದು, ಇದರಿಂದ 50,000 ರೂ. ಲಾಭವಾಗಿ ಬಂದಿರುತ್ತದೆ. ಇದನ್ನು ನಂಬಿದ ಇವರು ಇನ್ನು ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಅದೇ ಖಾತೆಗೆ ಪುನಃ 5,00,000 ಹಣವನ್ನು ಹೂಡಿಕೆ ಮಾಡಿದ್ದಾರೆ. ಬಳಿಕ 9,00,000, ಹೀಗೆ ನವೆಂಬರ್ 1ರಿಂದ 19ರವರೆಗೆ ಒಟ್ಟು 29,00,000 ರೂ. ನ.27ರಂದು 1,00,000 ಸೇರಿದಂತೆ ಒಟ್ಟು 46,00,000 ಹಣವನ್ನು ವರ್ಗಾವಣೆ ಮಾಡಿದ್ದಾರೆ. ನವೆಂಬರ್ 29ರಂದು ಹಣದ ಅವಶ್ಯಕತೆಯಿದ್ದು, 20,00,000 ಹಣವನ್ನು ವಿತ್ ಡ್ರಾ ಮಾಡಲು ಪ್ರಯತ್ನಿಸಿದಾಗ ಆಗಿರಲಿಲ್ಲ. ಆದ್ದರಿಂದ ಶ್ರದ್ಧಾ ಬೆಲಾನಿ ಹಾಗೂ ಅಭಿಷೇಕ್ ರಾಮ್ ಜೀ ಬಳಿ ಕೇಳೊದಾಗ ಹಣ ವಾಪಸ್ ಪಡೆಯಲು ಪುನಃ 8.78 ಲಕ್ಷ ರೂ ಹಣ ವರ್ಗಾವಣೆ ಮಾಡಿ ನಿಮ್ಮ ಖಾತೆಯನ್ನು ಮುಕ್ತಾಯ ಮಾಡಿಕೊಳ್ಳಬಹುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಅನುಮಾನ ಬಂದು ಮಂಗಳೂರು ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.