Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಕಲಿ ಟ್ರೇಡಿಂಗ್ ಆ್ಯಪ್ ಬಳಸಿ 500% ಲಾಭಾಂಶದ ಆಮಿಷ – 46 ಲಕ್ಷ ರೂ ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ನಕಲಿ ಟ್ರೇಡಿಂಗ್ ಆ್ಯಪ್ ಬಳಸಿ 500% ಲಾಭಾಂಶದ ಆಮಿಷ – 46 ಲಕ್ಷ ರೂ ವಂಚನೆ

    December 8, 2024
    Share

    ಮಂಗಳೂರು: ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿದರೆ 500% ಲಾಭಾಂಶ ಬರುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 46 ಲಕ್ಷ ರೂ. ವಂಚಿಸಿರುವ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ವ್ಯಕ್ತಿಯ ವಾಟ್ಸ್‌ಆ್ಯಪ್‌ಗೆ ಶ್ರದ್ಧಾ ಬೆಲಾನಿ ಎಂಬ ಅಪರಿಚಿತಳು ARES MANAGEMENT CORPORATION ಪರವಾಗಿ ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿದರೆ 500% ಲಾಭಾಂಶ ಬರುವುದಾಗಿ ನಂಬಿಸಿದ್ದಳು. ಅದರಂತೆ https://play.google.someco.shop/com.rehvu.dqlgdf/install.html ಎಂಬ ಲಿಂಕ್ ಒತ್ತಿ ರಿಜಿಸ್ಟ್ರೇಷನ್ ಮಾಡಿಕೊಂಡಿದ್ದರು. ಬಳಿಕ ಅವರು H 777 ARES Stock Exchange Group ಎಂಬ ವಾಟ್ಸಾಪ್ ಗ್ರೂಪ್‌ಗೆ ಸೇರಿಸಿದ್ದರು. ಗ್ರೂಪ್‌ನಲ್ಲಿ ಶ್ರದ್ಧಾ ಬೆಲಾನಿ ಗ್ರೂಪ್ ಅಡ್ಮಿನ್ ಆಗಿದ್ದು, ಈ ಟ್ರೇಡ್‌ನಲ್ಲಿ ಅಭಿಷೇಕ್ ರಾಮ್ ಜೀ ಚೀಫ್ ಆಗಿರುತ್ತಾರೆ. ಮೊದಲಿಗೆ ಸ್ಟಾಕ್ ಪರ್ಚೇಸ್ ಮಾಡಲು ತನ್ನ ಬ್ಯಾಂಕ್‌ನಿಂದ 2 ಲಕ್ಷ ಹಣವನ್ನು ಆರ್‌ಟಿಜಿಎಸ್ ಮಾಡಿದ್ದರು. ಮರುದಿನ ಆ ಸ್ಟಾಕ್‌ನ್ನು ಸೇಲ್ ಮಾಡಿದ್ದು, ಇದರಿಂದ 50,000 ರೂ. ಲಾಭವಾಗಿ ಬಂದಿರುತ್ತದೆ. ಇದನ್ನು ನಂಬಿದ ಇವರು ಇನ್ನು ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಅದೇ ಖಾತೆಗೆ ಪುನಃ 5,00,000 ಹಣವನ್ನು ಹೂಡಿಕೆ ಮಾಡಿದ್ದಾರೆ. ಬಳಿಕ 9,00,000, ಹೀಗೆ ನವೆಂಬರ್ 1ರಿಂದ 19ರವರೆಗೆ ಒಟ್ಟು 29,00,000 ರೂ. ನ.27ರಂದು 1,00,000 ಸೇರಿದಂತೆ ಒಟ್ಟು 46,00,000 ಹಣವನ್ನು ವರ್ಗಾವಣೆ ಮಾಡಿದ್ದಾರೆ. ನವೆಂಬರ್ 29ರಂದು ಹಣದ ಅವಶ್ಯಕತೆಯಿದ್ದು, 20,00,000 ಹಣವನ್ನು ವಿತ್ ಡ್ರಾ ಮಾಡಲು ಪ್ರಯತ್ನಿಸಿದಾಗ ಆಗಿರಲಿಲ್ಲ. ಆದ್ದರಿಂದ ಶ್ರದ್ಧಾ ಬೆಲಾನಿ ಹಾಗೂ ಅಭಿಷೇಕ್ ರಾಮ್ ಜೀ ಬಳಿ ಕೇಳೊದಾಗ ಹಣ ವಾಪಸ್ ಪಡೆಯಲು ಪುನಃ 8.78 ಲಕ್ಷ ರೂ ಹಣ ವರ್ಗಾವಣೆ ಮಾಡಿ ನಿಮ್ಮ ಖಾತೆಯನ್ನು ಮುಕ್ತಾಯ ಮಾಡಿಕೊಳ್ಳಬಹುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಅನುಮಾನ ಬಂದು ಮಂಗಳೂರು ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    Post Views: 173

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.