ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಹೊಸ ಬಾಡಿಗೆದಾರರು ಮತ್ತು ಹೊಸ ಮನೆ ಕಟ್ಟಿದವರಿಗೂ ಮಾಸಿಕ 53 ಯುನಿಟ್ ಜೊತೆಗೆ 10% ಉಚಿತ ವಿದ್ಯುತ್ ಸಿಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಬಾಡಿಗೆದಾರರು, ಹೊಸ ಮನೆ ನಿರ್ಮಿಸಿದವರಿಗೆ ಸರಾಸರಿ 53 ಯುನಿಟ್ ಜೊತೆಗೆ ಹೆಚ್ಚುವರಿಯಾಗಿ ಶೇ. 10% ರಷ್ಟು ಯುನಿಟ್ ಬಳಕೆಯ ಮಿತಿಯನ್ನು ವಿಧಿಸಲು ನಿರ್ಧರಿಸಲಾಗಿದೆ.ಒಂದು ವರ್ಷದವರೆಗೆ ಲೆಕ್ಕ ಸಿಗದವರಿಗೆ ಇದು ಅನ್ವಯವಾಗಲಿದೆ. 12 ತಿಂಗಳ ಬಳಿಕ ಸರಾಸರಿ ತೆಗೆದುಕೊಂಡು ಹೊಸ ಸರಾಸರಿ ನಿಗದಿ ಮಾಡಲಾಗುವುದು ಎಂದು ಹೇಳಿದ್ದಾರೆ.
200 ಯುನಿಟ್ ಉಚಿತ ವಿದ್ಯುತ್ ಷರತ್ತು ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 100 ಯುನಿಟ್ ಬಳಕೆ ನಂತರ 7 ರೂ. ದರ ವಿಧಿಸಲಾಗುತ್ತಿದ್ದು, 200 ಯುನಿಟ್ ದಾಟಿದ ಬಳಿಕ 8.20 ರೂ. ವಿಧಿಸಲಾಗುತ್ತಿದೆ. ದರ ಏರಿಕೆಯಲ್ಲಿ ತಪ್ಪಾಗಿದೆ ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲಿಸಿದ್ದಾರೆ ಎಂದು ತಿಳಿಸಿದ್ದಾರೆ.