ಮಂಗಳೂರು : ಮಂಗಳೂರು ನಗರದ ಮರೋಳಿ ಎಂಬಲ್ಲಿ ಆಯೋಜಿಸಿದ್ದ ಪಾರ್ಟಿಯನ್ನು ಅಡ್ಡಿಪಡಿಸಿದ ಆರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಇಂದು ಭಾನುವಾರ ರಂಗ್ ದೇ ಬರ್ಸಾ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು, ಡಿಜೆ ಪಾರ್ಟಿ ಮಾಡುತ್ತಾ ಹೋಳಿ ಎರಚಿ ಸಂಭ್ರಮಿಸುತ್ತಿದ್ದರು.
ಅಶ್ಲೀಲ ವರ್ತನೆ ನಡೆಯುತ್ತಿದೆ ಎಂದು ಆರೋಪಿಸಿ ಬಜರಂಗ ದಳ ಆರೋಪಿಸಿ ದಾಳಿ ನಡೆಸಿದರು. ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಅಲ್ಲಿದ್ದ ವಸ್ತುಗಳನ್ನು ಕಿತ್ತೆಸೆದು ಬ್ಯಾನರ್ ಹರಿದುಹಾಕಿ ದಾಂಧಲೆ ನಡೆಸಿದ್ದಾರೆ. ನಂತರ ಕಾರ್ಯಕ್ರಮ ಆಯೋಜಕರ ಮೇಲೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಂಕನಾಡು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬೆನ್ನಲ್ಲೆ ಹೋಳಿ ಆಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಬಜರಂಗದಳದ ಆರು ಸದಸ್ಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ