Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನ 3 ಕಡೆ ಚೂರಿ ಇರಿತ, ಹಲ್ಲೆ ಪ್ರಕರಣ- 7 ಆರೋಪಿಗಳು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರಿನ 3 ಕಡೆ ಚೂರಿ ಇರಿತ, ಹಲ್ಲೆ ಪ್ರಕರಣ- 7 ಆರೋಪಿಗಳು ಅರೆಸ್ಟ್

    May 4, 2025
    Share

    ಮಂಗಳೂರು: ನಗರದಲ್ಲಿ ಮೂರು ಕಡೆ ಗುರುವಾರ ಮತ್ತು ಶುಕ್ರವಾರ ನಡೆದ ಚೂರಿ ಇರಿತ ಹಾಗೂ ಹಲ್ಲೆ ಪ್ರಕರಣ ಸಂಬಂಧ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನ‌ರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ನಗರದ ಹೊರವಲಯದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಕಣ್ಣೂರಿನಲ್ಲಿ ಶುಕ್ರವಾರ ನಸುಕಿನಲ್ಲಿ ನೌಷಾದ್ ಅಹ್ಮದ್ (39) ಎಂಬಾತನಿಗೆ ಚೂರಿ ಇರಿದ ಪ್ರಕರಣ ಸಂಬಂಧ ಮುಡಿಪುವಿನ ಲೋಹಿತಾಶ್ವ (32), ವೀರನಗರದ ಪುನೀತ್ (28), ಕುತ್ತಾರಿನ ಗಣೇಶ ಪ್ರಸಾದ್‌(23) ನನ್ನು ಬಂಧಿಸಲಾಗಿದೆ.

    ಕಣ್ಣೂರು ಬಸ್ ನಿಲ್ದಾಣದ ಬಳಿ ನಿಂತಿದ್ದ ನೌಷಾದ್ ಅಹ್ಮದ್ ಅವರ ಬಳಿ ‘ಮಂಗಳೂರಿಗೆ ಬಸ್ ಇದೆಯಾ’ ಎಂದು ವಿಚಾರಿಸುವ ನೆಪದಲ್ಲಿ ಆರೋಪಿಗಳು ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಇವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.

    ಅದೇ ರೀತಿ ಅಲೇಕಳ ನಿವಾಸಿ ಫೈಝಲ್ (40) ಎಂಬುವರಿಗೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟಿನಲ್ಲಿ ಗುರುವಾರ ತಡರಾತ್ರಿ ಚೂರಿ ಇರಿದದ್ದು ನಾವೇ ಎಂದು ಇದೇ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದರು.

    ಇನ್ನು ಕಾವೂರು ಠಾಣಾ ವ್ಯಾಪ್ತಿಯ ದೇರೇಬೈಲ್ ಕೊಂಚಾಡಿ ಬಳಿ ಮೀನುಮಾರುವ ಮಹಮ್ಮದ್ ಲುಕ್ಕಾನ್ ಅವರ ಮೇಲೆ ಶುಕ್ರವಾರ ನಸುಕಿನಲ್ಲಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಜಪೆ ಬಳಿಯ ಕಳವಾರು ಕುರ್ಸುಗುಡ್ಡೆಯ ಲಿಖಿತ್ ಪೂಜಾರಿ (29), ಕುತ್ತಾರು ಸುಭಾಷ್ ನಗರದ ರಾಕೇಶ್ (34), ಸುರತ್ಕಲ್ ಎಂಎಸ್‌ಇಜೆಡ್ ನವಗ್ರಾಮ ಆಶ್ರಯ ಕಾಲೊನಿಯ ಧನರಾಜ್ ಅಲಿಯಾಸ್ ಧನು (24) ಹಾಗೂ ಪ್ರಸ್ತುತ ಮೂಡುಬಿದಿರೆ ಬನ್ನಡ್ಕದಲ್ಲಿ ವಾಸವಿರುವ ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿ ಗ್ರಾಮದ ಅಂಗರಕೆರೆ ನಿವಾಸಿ ಪ್ರಶಾಂತ್ ಶೆಟ್ಟಿ (26) ಬಂಧಿತ ಆರೋಪಿಗಳು ಎಂದು ಕಮಿಷನರ್ ತಿಳಿಸಿದರು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಕಮಿಷನರ್ ತಿಳಿಸಿದರು.

    Post Views: 199

    Related Posts

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.