Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಇಸ್ಪೀಟ್ ಜುಗಾರಿ ಅಡ್ಡೆ ಮೇಲೆ ದಾಳಿ- 7 ಮಂದಿ ಪೊಲೀಸ್‌ ವಶಕ್ಕೆ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಇಸ್ಪೀಟ್ ಜುಗಾರಿ ಅಡ್ಡೆ ಮೇಲೆ ದಾಳಿ- 7 ಮಂದಿ ಪೊಲೀಸ್‌ ವಶಕ್ಕೆ

    July 13, 2025
    Share

    ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಇರುವೈಲ್ ಗ್ರಾಮದಲ್ಲಿ ಕಾರ್ಯಚರಿಸುತ್ತಿದ್ದ ಇಸ್ಪೀಟ್ ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

    ಜು. 12 ರಂದು ರಾತ್ರಿ 23.15 ಗಂಟೆಗೆ ಈ ಕಾರ್ಯಚರಣೆ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ರವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮೂಡಬಿದ್ರೆ ತಾಲೂಕು ಇರುವೈಲ್ ಗ್ರಾಮದ ಕೋರಿಬೆಟ್ಟು ಬಳಿ ಗುಡ್ಡೆಯಲ್ಲಿ ಕೆಲವು ವ್ಯಕ್ತಿಗಳು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜುಗಾರಿ ನಡೆಸುತ್ತಿದ್ದಾರೆ ಎಂಬುದಾಗಿ ಖಚಿತ ಮಾಹಿತಿ ದೊರೆತ್ತಿತ್ತು.ಅಕ್ಟರ್, ಸಂತೋಷ್, ಪ್ರಶಾಂತ್, ಮಹಾಬಲ ಪೂಜಾರಿ, ಪ್ರಜ್ವಲ್, ಗಿರೀಶ್, ರಾಜೇಶ ಎಂಬವರುಗಳನ್ನು ವಶಕ್ಕೆ ಪಡೆದುಕೊಂಡುಕೊಂಡಿದ್ದಾರೆ.  ಗಣೇಶ, ಶ್ರೀನಾಥ್, ದಿನೇಶ್ ಕೆಂಪುಗುಡ್ಡೆ, ಕೇಶವ ಯಾನೆ ಅಪ್ಪು, ಹಾಗೂ ಇನ್ನಿತರರು ಅದೇ ಸಂದರ್ಭದಲ್ಲಿ‌ ಘಟನಾ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾರೆ.ಆಪಾಧಿತರ ವಶದಲ್ಲಿದ್ದ ನಗದು ಹಣ 10,100-, 52 ಇಸ್ಪೀಟ್ ಎಲೆಗಳು, 2 ಮೇಣದ ಬತ್ತಿ ಹಾಗೂ KA-09-EP-8948 ಮತ್ತು KA-19-EZ-1077 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಆಪಾಧಿತರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲಾಯಿತು.ಪೊಲೀಸ್ ಆಯುಕ್ತರ ಸುಧೀರ್ ಕುಮಾರ್ ರೆಡ್ಡಿ ಐ.ಪಿ.ಎಸ್ ರವರ ಆದೇಶದಂತೆ ಹಾಗೂ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ ಗೋಯಲ್. ಐ.ಪಿ.ಸಿ (ಕಾ ಮತ್ತು ಸು) ಮತ್ತು ರವಿಶಂಕರ (ಅ ಮತ್ತು ಸ) ರವರ ಹಾಗೂ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಕಾಂತ್ ರವರ ನಿರ್ದೇಶನದಂತೆ ಆರೋಪಿಗಳ ಪತ್ತೆ ಕಾರ್ಯದಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ. ಮತ್ತು ಸಿಬ್ಬಂದಿಗಳಾದ ರಾಜೇಶ, ನಾಗರಾಜ್, ಸುರೇಶ್, ವೆಂಕಟೇಶ್ ಚಂದ್ರಶೇಖರ ಮತ್ತು ಚಾಲಕ ಉಮೇಶ್ ರವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

    Post Views: 158

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.