Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರಿಯಲ್ ಎಸ್ಟೇಟ್ ಹೂಡಿಕೆ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ- ಮಹಿಳೆ ಅರೆಸ್ಟ್…!!
    ಇತ್ತೀಚಿನ ಸುದ್ದಿ

    ಉಡುಪಿ: ರಿಯಲ್ ಎಸ್ಟೇಟ್ ಹೂಡಿಕೆ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ- ಮಹಿಳೆ ಅರೆಸ್ಟ್…!!

    July 4, 2026
    Share

    ಉಡುಪಿ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಜಂಟಿ ಹೂಡಿಕೆ ಹೆಸರಿನಲ್ಲಿ ₹70 ಲಕ್ಷ ಪಡೆದು ವಂಚನೆ ಎಸಗಿದ ಆರೋಪದ ಜೊತೆಗೆ ಬ್ಲ್ಯಾಕ್‌ಮೇಲ್ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

    ಪೊಲೀಸರ ಮಾಹಿತಿ ಪ್ರಕಾರ, ಉಡುಪಿ ಮೂಲದ ದೂರುದಾರರು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ವೇಳೆ ಆರೋಪಿತೆ ಜೀನತ್ ಇಬ್ರಾಹಿಂ ಅವರ ಪರಿಚಯವಾಗಿತ್ತು. ಬಳಿಕ ಇಬ್ಬರೂ ಸೇರಿ ಉಡುಪಿಯಲ್ಲಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ಆರಂಭಿಸಿದ್ದರು. ಈ ವೇಳೆ ಆರೋಪಿತೆಯ ಮಾತು ನಂಬಿದ ದೂರುದಾರರು ಹೂಡಿಕೆ ಉದ್ದೇಶದಿಂದ ₹70 ಲಕ್ಷ ಹಣವನ್ನು ನೀಡಿದ್ದು, ಜಮೀನು ಖರೀದಿಗೆ ಬಳಸಬೇಕಿದ್ದ ಹಣವನ್ನು ಆರೋಪಿತೆ ತನ್ನ ವೈಯಕ್ತಿಕ ಉದ್ದೇಶಗಳಿಗೆ ಬಳಸಿಕೊಂಡು ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

    ದೂರುದಾರರು ತಮ್ಮ ಕಚೇರಿ ಮುಚ್ಚುವ ವೇಳೆ ಅಲ್ಲಿದ್ದ ಕೆಲವು ರಹಸ್ಯ ಕಡತಗಳು ಹಾಗೂ ಪೆನ್‌ಡ್ರೈವ್‌ಗಳು ದೊರೆತಿದ್ದು, ಅವುಗಳಲ್ಲಿ ಹಲವಾರು ಪ್ರಭಾವಿ ವ್ಯಕ್ತಿಗಳ ಖಾಸಗಿ ಹಾಗೂ ಅಶ್ಲೀಲ ಛಾಯಾಚಿತ್ರಗಳು ಮತ್ತು ವಿಡಿಯೊಗಳು ಇರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಹಣವನ್ನು ವಾಪಸ್ ಕೇಳಿದಾಗ ಆರೋಪಿತೆ ದೂರುದಾರರ ಹೊಸ ಕಚೇರಿಗೆ ಬಂದು ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದರೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ತನ್ನ ಬಳಿ ದೂರುದಾರರ ಅಶ್ಲೀಲ ವಿಡಿಯೊಗಳಿವೆ ಎಂದು ಹೇಳಿ ನಿರಂತರವಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಅಲ್ಲದೆ, ದೂರುದಾರರ ಪತ್ನಿ ಹಾಗೂ ಮಕ್ಕಳನ್ನು ಅಪಹರಿಸಿ ಹತ್ಯೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿದೆ. ಸಬೀನಾ ಇಲಿಯಾಸ್ ಹಾಗೂ ಇತರರು ಆರೋಪಿತೆಯೊಂದಿಗೆ ಸೇರಿ ಅಕ್ರಮವಾಗಿ ಹಣ ವಸೂಲಿ ಮಾಡುವ ಜಾಲ ನಡೆಸುತ್ತಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.

    ಈ ದೂರಿನ ಆಧಾರದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 79/2026ರಡಿ ಬಿಎನ್‌ಎಸ್ ಕಲಂ 308(6), 351(2), 318(2) ಹಾಗೂ 3(5) ಅನ್ವಯ ಪ್ರಕರಣ ದಾಖಲಾಗಿದೆ.

    ಪ್ರಕರಣದ ತನಿಖೆಗಾಗಿ ಪಿಎಸ್‌ಐ (ಕಾನೂನು ಮತ್ತು ಸುವ್ಯವಸ್ಥೆ) ಭರತೇಶ್ ಕಂಕಣವಾಡಿ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ಜುಲೈ 2ರಂದು ಆರೋಪಿತೆ ಜೀನತ್ ಇಬ್ರಾಹಿಂ (ಪತಿ: ಅಬ್ದಲ್ ಸಲಾಂ), ಕಂಚಿನಡ್ಕ ಮಸೀದಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಿದ್ದವರನ್ನು ಪಡುಬಿದ್ರೆಯ ಕಂಚಿನಡ್ಕದಲ್ಲಿ ಬಂಧಿಸಿದೆ.

    ಬಂಧಿತ ಆರೋಪಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪೊಲೀಸರು ಆರೋಪಿ ಮಹಿಳೆಯ ವಿಚಾರಣೆ ನಡೆಸುತ್ತಿದ್ದಾರೆ.

    ಈ ಆರೋಪಿತೆಯಿಂದ ಇದೇ ರೀತಿಯ ಮೋಸ ಅಥವಾ ವಂಚನೆಗೆ ಒಳಗಾಗಿರುವವರು ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    Post Views: 103

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.