Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ

    January 3, 2026
    Share

    ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಉಪಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ.ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

    ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತನ್ನ ತಮ್ಮನಿಗೆ ಹುಷಾರಿಲ್ಲ, ರೂಮಿಗೆ ಹೋಗುತ್ತೇನೆಂದು ಬ್ಯಾಂಕಿನಲ್ಲಿ ಹೇಳಿ ಹೋದವ ಬಳಿಕ ನಾಪತ್ತೆಯಾಗಿದ್ದ. ತನ್ನ ರೂಂನಲ್ಲಿ ಜೊತೆಯಾಗಿ ವಾಸ್ತವ್ಯ ಹೊಂದಿದ್ದ ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದ್ದು, ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆ ಯಾಗಿರುವುದಾಗಿ ದೂರಲಾಗಿತ್ತು.

    ಈ ಸಂಬಂಧ ಸುಬ್ರಹ್ಮಣ್ಯಂನ ಸಹೋದರ ಪುಲುಗುಜ್ಜು ನಾಗಫಣೀಂದ್ರ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಈ ಮಧ್ಯೆ ಬ್ಯಾಂಕ್ ಆಫ್ ಬರೋಡಾದ ಮಂಗಳೂರು ಪ್ರಾದೇಶಿಕ ವ್ಯವಸ್ಥಾಪಕ ಸಿ.ವಿ.ಎಸ್. ಚಂದ್ರಶೇಖರ್ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ 2023ರ ಸೆಪ್ಟೆಂಬರ್ 4ರಿಂದ 2025ರ ಡಿಸೆಂಬರ್ 19ರವರೆಗೆ ಪೆರ್ನೆ ಶಾಖೆಯಲ್ಲಿ ಉಪ ಪ್ರಬಂಧಕರಾಗಿ ಕೆಲಸ ಮಾಡುತ್ತಿದ್ದ ಸುಬ್ರಹ್ಮಣ್ಯಂ ಶಾಖೆಯ ಎ.ಟಿ.ಎಂ. ಮೇಲ್ವಿಚಾರಣೆಯನ್ನು ನೋಡಿಕೊಳ್ಳುತ್ತಿದ್ದು, ದಿನಾಂಕ 06-02-2024ರಿಂದ ದಿನಾಂಕ 16-12-2025ರ ಅವಧಿಯಲ್ಲಿ ಅದೇ ಬ್ಯಾಂಕಿನ ಎ.ಟಿ.ಎಂ ಮಿಷನ್‌ಗೆ ಪ್ರತಿದಿನ ನಿಗದಿಪಡಿಸಿದ ಹಣವನ್ನು ಜಮಾ ಮಾಡದೆ ಕಡಿಮೆ ನಗದು ಹಣವನ್ನು ಜಮಾ ಮಾಡಿ ಸತತವಾಗಿ ಬ್ಯಾಂಕಿನ ಹಣವನ್ನು ದುರುಪಯೋಗಪಡಿಸಿಕೊಂಡು ಒಟ್ಟು ರೂ 70,86,000 ರೂ. ಹಣವನ್ನು ವಂಚನೆ ಮಾಡಿರುತ್ತಾನೆ ಹಾಗೂ ಸೇಫ್ ಲಾಕರ್ ಪರಿಶೀಲಿಸಿದಾಗ 4.400 ಗ್ರಾಂ ತೂಕದ 55,000 ರೂ. ಅಂದಾಜು ಮೌಲ್ಯದ 1 ಮೌಲ್ಯದ 1 ಪ್ಯಾಕೆಟ್ ಚಿನ್ನವನ್ನು ಲಪಟಾಯಿಸಿ ವಂಚಿಸಿರುತ್ತಾನೆಂದು ಆರೋಪಿಸಿದ್ದಾರೆ.

    ಆರೋಪಿಯು ದುರುಪಯೋಗ ಪಡಿಸಿದ ಹಣದ ವ್ಯವಹಾರಗಳು ಬೆಳಕಿಗೆ ಬಂದಿರುವುದು ತಿಳಿದು ಬಂದಾಗ ದಿನಾಂಕ 17-12-2025ರಂದು ಅಸೌಖ್ಯದ ಕಾರಣ ಹೇಳಿ ಕಚೇರಿಯಿಂದ ನಿರ್ಗಮಿಸಿದವರು ಬಳಿಕ ನಾಪತ್ತೆಯಾಗಿದ್ದಾರೆಂದೂ, ಈ ಮೂಲಕ ಬ್ಯಾಂಕಿಗೆ ನಂಬಿಕೆ ದ್ರೋಹ ಮಾಡಿ ಒಟ್ಟು ಮೌಲ್ಯ ರೂ 71,41,000 ರೂ. ವಂಚನೆ ಮಾಡಿರುವುದಾಗಿ ದೂರಲಾಗಿದೆ. ದೂರನ್ನು ಸ್ವೀಕರಿಸಿದ ಉಪ್ಪಿನಂಗಡಿ ಪೊಲೀಸರು ವಂಚನೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

    Post Views: 191

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.