Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವ್ಯಕ್ತಿಗೆ 78,500 ವಂಚನೆ
    ಇತ್ತೀಚಿನ ಸುದ್ದಿ

    ಉಡುಪಿ: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವ್ಯಕ್ತಿಗೆ 78,500 ವಂಚನೆ

    December 7, 2022
    Share

    ಉಡುಪಿ: ಮ್ಯೂಚುವಲ್ ಫಂಡ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ವಂಚಕರು 78,500 ರೂ.ಗಳನ್ನು ವಂಚಿಸಿದ ಘಟನೆ ನಡೆದಿದೆ.

    ಅನುಷ್ ರವಿಶಂಕರ್ ವಂಚನೆಗೆ ಒಳಗಾದವರು. ಅನುಷ್ ಅವರಿಗೆ ಅಪರಿಚಿತರು 9395641735 ಸಂಖ್ಯೆಯಿಂದ ಕರೆ ಮಾಡಿ ಮ್ಯೂಚುವಲ್ ಫಂಡ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹಣ ದ್ವಿಗುಣಗೊಳಿಸಿ ನೀಡುವುದಾಗಿ ಆಮಿಷವೊಡ್ಡಿದ್ದಾರೆ. ಅವರ ಮಾತನ್ನು ನಂಬಿದ ಅನುಷ್ ಗೂಗಲ್ ಪೇ ಮುಖಾಂತರ ಆ ವ್ಯಕ್ತಿ ತಿಳಿಸಿದ ಬ್ಯಾಂಕ್ ಖಾತೆಗೆ ಕ್ರಮವಾಗಿ 1000 ರೂ., 3000 ರೂ., 3000 ರೂ. ಮತ್ತು 6500 ರೂ.ಗಳನ್ನು ಹೂಡಿಕೆ ಮಾಡಿದ್ದಾರೆ. ಆ ಬಳಿಕ ಮತ್ತೆ ಸೆಕ್ಯೂರಿಟಿ ಡೆಪಾಸಿಟ್, ಫಿಕ್ಸ್ ಡೆಪಾಸಿಟ್, ರಿಪಂಡ್ ಸೆಕ್ಯೂರಿಟಿ ಡೆಪಾಸಿಟ್‌ಗಳಿಗೂ ಹಣ ಪಾವತಿ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದ್ದು, ಆತ ಹೇಳಿದಂತೆ 9500 ರೂ., 22500 ರೂ., 14500 ರೂ., 18500 ರೂ.ಗಳನ್ನು ಪಾವತಿಸಿದ್ದಾರೆ.

    ಹೀಗೆ ಅನುಷ್ ಅವರು ಹಂತ ಹಂತವಾಗಿ ಒಟ್ಟು 78,500 ರೂ.ಗಳನ್ನು ಆತ ಹೇಳಿದಂತೆಯೇ ಪಾವತಿ ಮಾಡಿದ್ದಾರೆ. ಆದರೆ ಬಳಿಕ ಹೂಡಿಕೆ ಮಾಡಿದ ಹಣವನ್ನು ವಾಪಾಸ್ ನೀಡದೇ ವ್ಯಕ್ತಿ ವಂಚನೆ ಎಸಗಿದ್ದಾನೆ. ಈ ಹಿನ್ನೆಲೆಯಲ್ಲಿ ಉಡುಪಿ ಸೆನ್ ಪೊಲೀಸ್ ಠಾಣೆಗೆ ಅನುಷ್ ಅವರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

    Post Views: 146

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.