Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಂಪವೆಲ್ ರೋಹನ್ ಸ್ಕ್ವೇರ್‌ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ಪಂಪವೆಲ್ ರೋಹನ್ ಸ್ಕ್ವೇರ್‌ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

    August 15, 2025
    Share

    ಮಂಗಳೂರು: ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು.

    ಕಾರ್ಯಕ್ರಮವು ಬೆಳಿಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ರವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

    ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಸ್ಥಾಪಕರಾದ ರೋಹನ್ ಮೊಂತೆರೋರವರು, “ಸ್ವಾತಂತ್ರ್ಯವು ಕೇವಲ ಒಂದು ದಿನದ ಆಚರಣೆಯಲ್ಲ; ಪ್ರತಿದಿನವೂ ಅದನ್ನು ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಯುವ ಪೀಳಿಗೆ ದೇಶಾಭಿವೃದ್ಧಿಯಲ್ಲಿ ತೊಡಗಿಕೊಳ್ಳುವುದು ಅತ್ಯವಶ್ಯಕ ” ಎಂದು ಹೇಳಿದರು.

    ಈ ಸಂದರ್ಭದಲ್ಲಿ ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ಅವರು ರಾಷ್ಟ್ರಸೇವೆಗೆ ಸಲ್ಲಿಸಿದ ಮಹತ್ತರ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಧನ್ಯವಾದ ಸ್ವೀಕರಿಸಿ ಮಾತನಾಡಿನ ಅವರು “ದೇಶ ಸೇವೆ ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣ. ಈ ಗೌರವ ನನ್ನ ನಿವೃತ್ತ ಜೀವನದಲ್ಲೂ ದೇಶಸೇವೆಯ ನೆನಪುಗಳನ್ನು ಮತ್ತಷ್ಟು ಸ್ಮರಣೀಯವಾಗಿಸುತ್ತದೆ. ಓದು, ಉದ್ಯೋಗ, ಹಣ — ಇವು ಜೀವನದ ಒಂದು ಭಾಗ ಮಾತ್ರ. ಇಂದಿನ ಯುವ ಪೀಳಿಗೆ ದೇಶಕ್ಕಾಗಿ ಸೇವೆ ಸಲ್ಲಿಸುವ ಧ್ಯೇಯವನ್ನೂ ಹೃದಯದಲ್ಲಿ ಇಟ್ಟುಕೊಳ್ಳಬೇಕು” ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ನಿರ್ದೇಶಕ ಡಿಯಾನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಸುಮನಾ ಭಾಗವಹಿಸಿದ್ದರು.

    Post Views: 142

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.