Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ 8 ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ 8 ಆರೋಪಿಗಳ ಬಂಧನ

    May 3, 2025
    Share

    ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ 8 ಆರೋಪಿಗಳನ್ನು ಬಂಧಿಸಿದ್ದಾರೆ.

    ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಮಂಗಳೂರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಲಿದ್ದಾರೆ. ಇಂದು ಬೆಳಿಗ್ಗೆ ಕಮಿಷನರ್ ಕಚೇರಿಯಲ್ಲಿ 11 ಗಂಟೆಗೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

    ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತಂತೆ ಪೊಲೀಸರ ಜೊತೆಗೆ ಜಿ ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪರಮೇಶ್ವರ್ ಸಭೆ ನಡೆಸಲಿದ್ದು, ಗೃಹ ಸಚಿವ ಜಿ ಪರಮೇಶ್ವರ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಂಟಿಯಾಗಿ ಸಭೆ ನಡೆಸಲಿದ್ದಾರೆ. ಎಡಿಜಿಪಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಕಮಿಷನರ್ ಹಾಗು ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿರಲಿದ್ದಾರೆ.

    ನಿನ್ನೆ ಸುಹಾಸ್‌ ಶೆಟ್ಟಿ ಕೊಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಮಂಗಳೂರು ಹಾಗೂ ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಿದ್ದವು. ಮಂಗಳೂರು ಬಂದ್‌ ಸಂಪೂರ್ಣ ಯಶಸ್ವಿಯಾಗಿತ್ತು. ಬಂದ್‌ ಉಲ್ಲಂಘಿಸಿ ಬೀದಿಗಿಳಿದ ಖಾಸಗಿ ಬಸ್ಸುಗಳಿಗೆ ಕಲ್ಲು ತೂರಲಾಗಿತ್ತು. ಉಡುಪಿಯಲ್ಲಿ ಮುಸ್ಲಿಂ ಯುವಕನೊಬ್ಬನಿಗೆ ಇರಿಯಲಾಗಿದೆ.

    Post Views: 187

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.