Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್​​ : ಸದನದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್​​ ಮಾಹಿತಿ
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್​​ : ಸದನದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್​​ ಮಾಹಿತಿ

    December 18, 2025
    Share

    ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್​​ಸೆಂಟರ್​​ನ ಉದ್ಯೋಗಿಗಳ ಕಿಡ್ನ್ಯಾಪ್​​ ಕೇಸ್​​ಗಳಲ್ಲಿಯೂ ಪೊಲೀಸ್​​ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಇದೀಗ ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ 88 ಪೊಲೀಸರು ದರೋಡೆ, ಅಪಹರಣ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ.

    ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್​​ನ ಜೆಡಿಎಸ್​​ ಸದಸ್ಯ ಶರವಣ ಅವರ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್​​, ರಾಜ್ಯದಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ದಾರೆ. ಗೃಹಸಚಿವರ ಉತ್ತರದ ಬೆನ್ನಲ್ಲೇ ಈ ಬಗ್ಗೆ ಶರವಣ ಅವರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

    ಪೊಲೀಸರೇ ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ರಕ್ಷಕರೇ ಭಕ್ಷಕರಾಗುತ್ತಿರುವ ಕಾರಣ ಪೊಲೀಸರ ಮೇಲೆ ಜನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಪೊಲೀಸರನ್ನು ಅಮಾನತು ಮಾಡುವುದಲ್ಲ, ಕೆಲಸದಿಂದಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

    Post Views: 189

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.