Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪೊಲೀಸ್ ಎಂದು ನಂಬಿಸಿ ಬೆದರಿಕೆ ಹಾಕಿ 89 ಲಕ್ಷ ರೂ. ಆನ್ ಲೈನ್ ವಂಚನೆ !
    ಇತ್ತೀಚಿನ ಸುದ್ದಿ

    ಉಡುಪಿ: ಪೊಲೀಸ್ ಎಂದು ನಂಬಿಸಿ ಬೆದರಿಕೆ ಹಾಕಿ 89 ಲಕ್ಷ ರೂ. ಆನ್ ಲೈನ್ ವಂಚನೆ !

    September 15, 2024
    Share

    ಉಡುಪಿ: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಬೆದರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ನಗರ ನಿವಾಸಿ ಸಂತೋಷ ಕುಮಾರ್(45) ಎಂಬವರಿಗೆ ಅಪರಿಚಿತರು ಟೆಲಿಕಾಂ ರೆಗ್ಯುಲೇಟರ್‌ ಅಥಾರಿಟಿ ಆಫ್ ಇಂಡಿಯಾದಿಂದ ಕರೆ ಮಾಡುತ್ತಿರುವುದಾಗಿ ನಂಬಿಸಿ, ನಿಮ್ಮ ಮೊಬೈಲ್ ನಂಬರ್ ನಿಂದ ಕಾನೂನು ಬಾಹಿರ ಜಾಹೀರಾತು ಹಾಗೂ ಅಶ್ಲೀಲ ಸಂದೇಶ ಬಂದಿದ್ದು, ಅದರಂತೆ ನಿಮ್ಮ ಮೇಲೆ ಒಟ್ಟು 17 ಎಫ್.ಐ.ಆರ್ ಆಗಿರುವುದಾಗಿ ತಿಳಿಸಿದ್ದಾರೆ. ಇನ್ನು 2 ಗಂಟೆಯ ಒಳಗೆ ನಿಮ್ಮ ಹೆಸರಿನಲ್ಲಿರುವ ಎಲ್ಲಾ ಕಾಂಟಾಕ್ಟ್ ನಂಬರ್ ಡಿಸ್ಕನೆಕ್ಟ್ ಮಾಡಲಾಗುವುದು ಮತ್ತು ನಿಮ್ಮ ಮೇಲೆ ಆರೆಸ್ಟ್ ವಾರಂಟ್ ಆಗಿದೆ ಎಂದು ಬೆದರಿಸಿದ್ದಾರೆ. ನಂತರ ಪೊಲೀಸ್‌ ಸಮವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬ ಮುಂಬೈ ಪೊಲೀಸ್‌ ಅಧಿಕಾರಿ ಎಂದು ಹೇಳಿ ವಾಟ್ಸಪ್ ವಿಡಿಯೋ ಕರೆ ಮಾಡಿದ್ದು, ಪ್ರಕರಣ ದಾಖಲಾಗಿರುವ ಬಗ್ಗೆ ತಿಳಿಸಿ ಬ್ಯಾಂಕ್ ಖಾತೆ ಹಾಗೂ ಅದರಲ್ಲಿನ ಹಣದ ವಿವರವನ್ನು ಪಡೆದಿದ್ದಾನೆ. ಖಾತೆಯಲ್ಲಿರುವ ಹಣವನ್ನು ತಾನು ಸೂಚಿಸಿದ ಖಾತೆಗೆ ವರ್ಗಾವಣೆ ಮಾಡುವಂತೆ ತಿಳಿಸಿದ್ದು, ಹಣದ ಬಗ್ಗೆ ಕ್ಲೀಯರ್ ಆಗುವವರೆಗೆ ನಿಮ್ಮನ್ನು ವರ್ಚುವಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದನು. ಅದರಂತೆ ಸಂತೋಷ್ ಕುಮಾರ್ ಸೆಪ್ಟೆಂಬರ್ 12ರಂದು 89,00,000ರೂ. ಹಣವನ್ನು ವರ್ಗಾಯಿಸಿದ್ದರು. ಪೊಲೀಸ್‌ ಅಧಿಕಾರಿ ಎಂದು ನಂಬಿಸಿ ಡಿಜಿಟಲ್ ಆರೆಸ್ಟ್ ಮಾಡಿರುವುದಾಗಿ ಬೆದರಿಸಿ ಹಣ ವರ್ಗಾಯಿಸಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

    Post Views: 165

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.