Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಕೀಟ ಕಚ್ಚಿ 8ನೇ ತರಗತಿ ವಿದ್ಯಾರ್ಥಿನಿ ದಾರುಣ ಮೃತ್ಯು..!
    ಇತ್ತೀಚಿನ ಸುದ್ದಿ

     ಕೀಟ ಕಚ್ಚಿ 8ನೇ ತರಗತಿ ವಿದ್ಯಾರ್ಥಿನಿ ದಾರುಣ ಮೃತ್ಯು..!

    March 7, 2023
    Share

    ಪತ್ತನಂತಿಟ್ಟ: ವಿಷಪೂರಿತ ಕೀಟ ಕಚ್ಚಿ ಪುಟ್ಟ ಬಾಲಕಿ ಮೃತ ಪಟ್ಟಿರುವ ದಾರುಣ ಘಟನೆ ಕೇರಳದ ಪತ್ತನಂತಿಟ್ಟದ ತಿರುವಲ್ಲಾದಲ್ಲಿ ನಡೆದಿದೆ. ಪೆರಿಂಗಾರ ಕೊಚಾರಿಮುಕ್ಕಂನ ಪನಾರ ಮನೆ ನಿವಾಸಿ ಅನೀಶ್ ಮತ್ತು ಶಾಂತಿ ಕೃಷ್ಣನ್ ದಂಪತಿಯ ಪುತ್ರಿ ಅಂಜಿತಾ ಅನೀಶ್ ಮೃತಪಟ್ಟ ಬಾಲಕಿ. ಮಾ.5ರಂದು ಸಂಜೆ ಮನೆಯ ಸಮೀಪದ ಹೊಲದಲ್ಲಿ ಸ್ನೇಹಿತೆಯರೊಂದಿಗೆ ಆಟವಾಡುತ್ತಿದ್ದಾಗ ಕಿವಿಯ ಕೆಳಗೆ ಕೀಟವೊಂದು ಕಚ್ಚಿದೆ. ನೊಣದಂತಹ ಜೀವಿ ಕಚ್ಚಿರುವುದಾಗಿ ಬಾಲಕಿ ಮನೆಯಲ್ಲಿ ಹೇಳಿದ್ದಾಳೆ. ಕೀಟ ಕಚ್ಚಿದ 30 ನಿಮಿಷದಲ್ಲಿ ಬಾಲಕಿಯ ಇಡೀ ದೇಹದಲ್ಲಿ ತುರಿಕೆ ಆರಂಭವಾಗಿದೆ. ಕೂಡಲೇ ಬಾಲಕಿಯನ್ನು ತಿರುವಲ್ಲಾ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಥಮ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗುವಷ್ಟರಲ್ಲಿ ಬಾಲಕಿ ಕುಸಿದು ಬಿದ್ದಿದ್ದಾಳೆ. ಮತ್ತೆ ಅವಳನ್ನು ತಿರುವಲ್ಲಾದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಶ್ವಾಸಕೋಶಕ್ಕೆ ಸೋಂಕು ಹರಡಿದ ಹಿನ್ನಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ತಿರುವಲ್ಲಾದ ಎಂಜಿಎಂ ಶಾಲೆಯ ವಿದ್ಯಾರ್ಥಿನಿಯಾಗಿರುವ ಅಂಜಿತಾ ಅನೀಶ್ ಗೆ ಪ್ರಬಲ ವಿಷಕಾರಿ ಕೀಟ ಕಚ್ಚಿರಬಹುದೆಂದು ವೈದ್ಯಾಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.

    Post Views: 246

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.