Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಹೋಂ ನರ್ಸ್‌ನಿಂದ 9 ಲ.ರೂ ವಂಚನೆ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್‌‌..!
    ಇತ್ತೀಚಿನ ಸುದ್ದಿ

    ಕಾರ್ಕಳ: ಹೋಂ ನರ್ಸ್‌ನಿಂದ 9 ಲ.ರೂ ವಂಚನೆ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್‌‌..!

    December 17, 2024
    Share

    ಕಾರ್ಕಳ: ಹೋಂ ನರ್ಸ್‌ ಆಗಿ ಮನೆ ಸೇರಿಕೊಂಡು ಮನೆ ಯಜಮಾನರ ಗೂಗಲ್‌ ಪೇ ಪಿನ್‌ ಕದ್ದು 9 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬಯಿ ದಹಿಸರ್‌ನಲ್ಲಿ ಅರೆಸ್ಟ್ ಮಾಡಿದ್ದಾರೆ.

    ಬಂಧಿತ ಆರೋಪಿಗಳನ್ನು ಕುಕ್ಕುಂದೂರಿನ ಕುಪ್ಪಬೆಟ್ಟು ನಿವಾಸಿ ಕಾರ್ತಿಕ್‌ ಶೆಟ್ಟಿ (28) ಮತ್ತು ತೆಳ್ಳಾರು ನಿವಾಸಿ ರತ್ನಾಕರ್‌ (50) ಎಂದು ಗುರುತಿಸಲಾಗಿದೆ. ಆರೋಪಿಗಳು ಶಶಿಧರ್‌ (75) ಎಂಬುವವರಿಗೆ 9 ಲ. ರೂ ವಂಚನೆ ಮಾಡಿದ್ದಾರೆ.

    ಶಶಿಧರ್‌ ಅವರ ಕೋರಿಕೆಯ ಮೇರೆಗೆ ಅಲೈಟ್‌ಕೇರ್‌ ಎಂಬ ಸಂಸ್ಥೆಯ ಆರೋಪಿ ರತ್ನಾಕರ್ ನಿಂದ ಆರೋಪಿ ಕಾರ್ತಿಕ್‌ ಶೆಟ್ಟಿ ಹೋಂ ನರ್ಸ್‌ ಆಗಿ ಮನೆಗೆ ಕೆಲಸಕ್ಕೆ ನಿಯೋಜನೆಗೊಂಡಿದ್ದ.

    ಈ ವೇಳೆ ಶಶಿಧರ್‌ ಅವರು ಬೇರೆಯವರಿಗೆ ಹಣ ವರ್ಗಾವಣೆ ಮಾಡುವ ವೇಳೆ ಆರೋಪಿಯು ಗೂಗಲ್‌ ಪೇ ಪಿನ್‌ ನಂಬರ್‌ ಗಮನಿಸಿದ್ದ. ಬಳಿಕ ಹಂತಹಂತವಾಗಿ ಲಕ್ಷಾಂತರ ರೂ. ಹಣವನ್ನು ಭಾರತ್‌ ಬ್ಯಾಂಕ್‌ ಕೋ-ಅಪರೇಟಿವ್‌ ಸೊಸೈಟಿ ಖಾತೆಗೆ ಗೂಗಲ್‌ ಪೇ ಮುಖಾಂತರ ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ತನಿಖೆ ಕೈಗೆತ್ತಿಕೊಂಡ ಕಾರ್ಕಳ ನಗರ ಠಾಣೆ ಪೊಲೀಸರು ಆರೋಪಿಗಳ ಪತ್ತೆ ಬಲೆ ಬೀಸಿದ್ದರು. ಆರೋಪಿಗಳು ಮುಂಬಯಿಯಲ್ಲಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಅಲ್ಲಿಗೆ ತೆರಳಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    Post Views: 264

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.