ಉಳ್ಳಾಲ: ಗಾಂಜಾ ಸೇವಿಸಿ ರೌಡಿಸಂ ನಡೆಸಿದ್ದ ಮಾಜಿ ರೌಡಿ ಶೀಟರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೇವಂತಿಗುಡ್ಡೆ ನಿವಾಸಿ ಶಮೀರ್ (41) ಆತ್ಮ ಹತ್ಯೆಕ್ಕೀಡಾದ ವ್ಯಕ್ತಿ.. ಶಮೀರ್ ಕ್ಯಾನ್ಸರ್‌ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಜ್ ಹಾಕಿದ್ದನಂತೆ. ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತ ಪಟ್ಟಿದ್ದರಂತೆ. ಕಳೆದ ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾವೂ ಪಲ್ಟಿ ಹೊಡೆದಿದ್ದು,ರಿಕ್ಷಾದ ಲೋನ್ ಬಾಕಿಯಿತ್ತು. ಮೃತ ಶಮೀರ್‌ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದರು ಎನ್ನಲಾಗುತ್ತಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ ,ಮಕ್ಕಳು ತವರು ತೆರಳಿದ್ದರು. ಇಂದು ಬೆಳಿಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.