Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಚಲನಚಿತ್ರ ನಟಿ ರಾಧಿಕಾ ಅವರ ಮನೆಯ ಕೆಲಸದಾಳು ನಾಪತ್ತೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಚಲನಚಿತ್ರ ನಟಿ ರಾಧಿಕಾ ಅವರ ಮನೆಯ ಕೆಲಸದಾಳು ನಾಪತ್ತೆ

    October 19, 2023
    Share

    ಬಂಟ್ವಾಳ: ಸ್ಟಾರ್ , ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲುಕಿನ ಮಾದನಗಿರಿ ನಿವಾಸಿ ಮಹಾದೇವ ಮಾರಿಪಟಗಾರ್ ಅವರ ಪತ್ನಿ ನಾಗರತ್ನ (33) ಕಾಣೆಯಾದ ಮಹಿಳೆ.
    ‌ತಾಲೂಕಿನ‌ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಎಂಬಲ್ಲಿ ಚಲನ ಚಿತ್ರ ನಟಿ ರಾಧಿಕ ಅವರ ಎಸ್ಟೇಟ್‌ ನಲ್ಲಿ ಕಳೆದ ಆರು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ ನಾಗರತ್ನ ಇದೀಗ ಕಾಣೆಯಾಗಿರುವುದು. ನಾಗರತ್ನ ಅವರ ಪತಿ ಮಹಾದೇವ ಮಾರಿಪಟಗಾರ್ ಅವರ ಜೊತೆಯಲ್ಲಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು.

    ಅ.13 ರಂದು ಗಂಡ ಹೆಂಡತಿ ಇಬ್ಬರು ಎಸ್ಟೇಟ್ ನಲ್ಲಿ ಕೆಲಸಕ್ಕೆಹೋಗಿದ್ದು, ಅ ದಿನ ಬೆಳಿಗ್ಗೆ 10.30 ರ ವೇಳೆಗೆ ಎಸ್ಟೇಟ್ ನಲ್ಲಿರುವ ಮನೆಗೆ ಚಾ ಕುಡಿಯಲು ಹೋಗಿ ಬರುತ್ತೇನೆ ‌ಎಂದು ಹೋದವಳು ಮತ್ತೆ ಕೆಲಸದ ಕಡೆ ಬಂದಿಲ್ಲ. ಚಹಾ ಕುಡಿಯಲು ಹೋದವಳು ಯಾಕೆ ಬಂದಿಲ್ಲ ಎಂದು ‌ಮನೆ ಕಡೆ ಹೋಗಿ‌ನೋಡಿದಾಗ ಆಕೆ ಮನೆಯಲ್ಲಿರದೆ ಕಾಣೆಯಾಗಿದ್ದಳು. ಮನೆಯಿಂದ ಆಕೆ ಬಟ್ಟೆ , ಆಧಾರ್ ಕಾರ್ಡ್, ನಗದು ಸಹಿತ ಹೋಗಿರುವ ವಿಚಾರ ಗಮನಕ್ಕೆ ಬಂದಿದೆ.

    ಅವಳು ಹಿಂದೆ ಗಂಡನ‌ಜೊತೆ ಮುನಿಸಿಕೊಂಡು ಧರ್ಮಸ್ಥಳ,ಮಂಗಳೂರು ಕಡೆ ಹೋಗಿ ತಿರುಗಾಡಿಕೊಂಡು ವಾಪಸು ಬರುತ್ತಿದ್ದಳು.ಇದು ಅದೇ ರೀತಿ ಹೋಗಿರಬಹುದು ಅಂದು‌ಕೊಂಡಿದ್ದ ಗಂಡನಿಗೆ ಅ.14.ರಂದು‌ ಮರುದಿನ ಪೋನ್ ಮಾಡಿದ ಅವಳು ನನ್ನನ್ನು ಹುಡುಕಬೇಡಿ ನಾನು ದೂರ ಹೋಗುತ್ತೇನೆಂದು ತಿಳಿಸಿದ್ದಾಳೆ. ಇದೀಗ ‌ಮೊಬೈಲ್ ನಂ.ಸ್ವಿಚ್ ಆಪ್ ಆಗಿದ್ದು, ನಾಪತ್ತೆಯಾಗಿದ್ದಾಳೆ ಎಂದು ‌ಗಂಡ ದೂರು ನೀಡಿದ್ದಾಳೆ. ಈಕೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿಬಂಟ್ವಾಳ ನಗರ ಪೋಲೀಸ್ ಠಾಣೆಯನ್ನು ಸಂಪರ್ಕ ಮಾಡುವಂತೆ ತಿಳಿಸಿದ್ದಾರೆ.

    Post Views: 186

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.