ಮಂಗಳೂರು: ಉಳಾಯಿಬೆಟ್ಟು ಗ್ರಾಮದ ಇಡ್ಮ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ರಾತ್ರಿ ದಾಳಿ ನಡೆಸಿ ಟಿಪ್ಪರ್ ಲಾರಿ ಮತ್ತು ಮರಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ರಾತ್ರಿ 10.45ರ ಸುಮಾರಿಗೆ ದಾಳಿ ನಡೆಸಿದ್ದು ಈ ವೇಳೆ ಇಬ್ಬರು ವ್ಯಕ್ತಿಗಳು ಪರಾರಿಯಾಗಿದ್ದಾರೆ.
ಸ್ಥಳದಲ್ಲಿದ್ದ ಟಿಪ್ಪರ್ ಲಾರಿ ಹಾಗೂ ಒಂದು ಲೋಡ್ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.