ಬೆಂಗಳೂರು:ಶೀಘ್ರದಲ್ಲೇ 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಇಂದು ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಆರು ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತದೆ ಐದು ಸಂಚಾರಿ ಪೋಲಿಸ್ ಠಾಣೆಯನ್ನು ಸ್ಥಾಪಿಸಲಾಗುವುದು ಎಂದರು.
“ಖಾಲಿ ಇರುವ ಹುದ್ದೆಗಳಿಗೆ 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ” ಎಂದರು.
“ದೇಶದಲ್ಲಿ ರಾಜ್ಯ ಪೊಲೀಸ್ ಇಲಾಖೆ ಉತ್ತಮ ಹೆಸರು ಪಡೆದಿದೆ. ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡುವವರು. ಕೆಲಸ ಮಾಡುವಾಗ ಅನೇಕ ಅಪಾಯ ಎದುರಿಸುತ್ತಾರೆ. ಈ ವೇಳೆ ಪ್ರಾಣವನ್ನೂ ಕಳೆದುಕೊಳ್ಳುತ್ತಾರೆ. ಭಾರತದಲ್ಲಿ ಸೆಪ್ಟೆಂಬರ್ 22ರಿಂದ ಆಗಸ್ಟ್ 23 ರವರೆಗೆ ಸುಮಾರು 189 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 16 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರೆಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ ” ಎಂದರು.