ಉಡುಪಿ : ಉಡುಪಿಯಲ್ಲಿ ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶೃತಿನ್ ಶೆಟ್ಟಿ (35) ಮೃತ ದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು ಅಸಹಜ ಸಾವೆಂದು ಪೊಲೀಸರಿಉ ಪ್ರಕರಣ ದಾಖಲು ಮಾಡಿದ್ದಾರೆ. ಅಕ್ಟೋಬರ್ 19 ಕ್ಕೆ ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದರು.
ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್, ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) . ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಪೂಜಾ ಶೆಟ್ಟಿ ಶುಕ್ರವಾರದಂದು ದೂರು ದಾಖಲಿಸಿದ್ದಾರೆ.
ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶೃತಿನ್ ಶೆಟ್ಟಿ ಅಕ್ಟೋಬರ್ 16ರಂದು ರಜೆ ಹಾಕಿದ್ದು ತಾನು ಮನೆಗೆ ಬರುತ್ತಿರುವುದಾಗಿ ಪತ್ನಿಗೆ ಮೊಬೈಲ್ ಮೂಲಕ ತಿಳಿಸಿದ್ದರು. ಆದರೆ ಮನೆಗೂ ಬಾರದೆ, ಕಾರ್ಕಳ ನಗರ ಠಾಣೆಗೂ ಹೋಗದೆ ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದರು. ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಭಡ್ತಿಗೊಂಡು ಕಾರ್ಕಳ ನಗರ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೇಬಲ್ ಆಗಿ ಬಂದಿದ್ದರು. ಅವರ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಸಚಿನ್ ಪತ್ನಿ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲು ಮಾಡಿದ್ದರು.