ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಕಡಲತೀರದಲ್ಲಿ ಮುಳುಗುತ್ತಿದ್ದ ಮೂವರು ಯುವಕರ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ.ಬಾಗಲಕೋಟೆಯ ಬಸವನಗೌಡ ಪಾಟೀಲ್, ಶರಣು, ರವಿಚಂದ್ರನ್ ರಕ್ಷಣೆಗೊಳಗಾದವರು.ಲೈಫ್‌ಗಾರ್ಡ್ ಸಿಬ್ಬಂದಿ ಶಶಿ, ಪಾಂಡು, ರಾಮಚಂದ್ರ ಮೂವರ ರಕ್ಷಣೆ ಮಾಡಿದ್ದು, ಅಸ್ವಸ್ಥಗೊಂಡ ಪ್ರವಾಸಿಗನಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ..