ಬೆಂಗಳೂರು : ಬೆಂಗಳೂರಲ್ಲಿ ಸ್ಫೋಟಕ್ಕೆ ಸಂಚಿಸಿದ ಐವರು ಶಂಕಿತ ಉಗ್ರರ ಪ್ರಕರಣವನ್ನು ಸಿಸಿಬಿಯು ಎನ್‌ಐಎಗೆ ಪ್ರಕರಣವನ್ನು ವರ್ಗಾಯಿಸಿದೆ.ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಎಫ್ಐಆರ್ (FIR) ದಾಖಲಿಸಿಕೊಂಡಿದ್ದಾರೆ. ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್ ಬಂಧಿತ ಶಂಕಿತ ಉಗ್ರರು.
ಸದ್ಯ ಎನ್ಐಎ ಅಧಿಕಾರಿಗಳು ಸಿಸಿಬಿ ಬಂಧಿಸಿದ್ದ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಈ ಐವರು ಶಂಕಿತ ಉಗ್ರರು ಬೆಂಗಳೂರು ನಗರದಲ್ಲಿ ಸರಣಿ ಸ್ಫೋಟಕ್ಕೆ ಸಂಚಿರೂಪಿಸಿದ್ದರು ಅಲ್ಲದೆ ಇವರು ಗ್ರೈನೆಡ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಸಹ ಸಂಗ್ರಹಿಸಿದ್ದರು.ಇದಕ್ಕೆ ಜೈಲಿನಲ್ಲಿ ಇದ್ದುಕೊಂಡೇ ಉಗ್ರ ಜುನೈದ್ ಇವರಿಗೆ ಮಾರ್ಗದರ್ಶನ ನೀಡುತ್ತಿದ್ದ ಎನ್ನಲಾಗುತ್ತಿತ್ತು.
ಆರೋಪಿಗಳು ಸುಲ್ತಾನ್ ಪಾಳ್ಯದ ಪ್ರಾರ್ಥನಾ ಸ್ಥಳ ಮತ್ತು ಆರ್.ಟಿ ನಗರದ ಕನಕ ಬಡಾವಣೆಯ ಸೈಯದ್ ಸುಹೇಲ್ ಬಾಡಿಗೆ ಮನೆಯಲ್ಲಿ ಸಭೆ ಸೇರಿ ಉಗ್ರ ಚಟುವಟಿಕೆ ಹಾಗೂ ಸ್ಫೋಟ ನಡೆಸುವುದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಚರ್ಚೆ ನಡೆಸಿದ್ದರು. ಈ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ಕೇಂದ್ರ ಗುಪ್ತಚರ ಇಲಾಖೆ ಸಂಪರ್ಕಿಸಿದ್ದರು. ನಂತರ ಎರಡೂ ವಿಭಾಗದ ಸಿಬ್ಬಂದಿ ಇದೇ ವರ್ಷ ಜುಲೈ 19 ರಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದರು.
ಈ ಐವರು ಸಂಕಿತ ಉಗ್ರರನ್ನು ಬಂಧಿಸುವ ವೇಳೆ ಇವರ ಹತ್ತಿರ ಸಂಗ್ರಹಿಸಲಾಗಿದ್ದ ಎನ್ನಲಾದ 7 ನಾಡ ಪಿಸ್ತೂಲ್, 45 ಜೀವಂತ ಗುಂಡುಗಳು, ವಾಕಿಟಾಕಿಗಳು, 12 ಮೊಬೈಲ್, ಡ್ರಾಗರ್ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದರು. ದೇಶದ್ರೋಹ ಚಟುವಟಿಕೆಯಲ್ಲಿ ಭಾಗಿ, ಅಪರಾಧದ ಒಳಸಂಚು, ಶಸ್ತ್ರಾಸ್ರ ಕಾಯ್ದೆ ಅಡಿ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇನ್ನೂ ಇವರಿಗೆ ಮಾನಿಟರ್ ಮಾಡುತ್ತಿದ್ದ ಉಘ್ರಜನೆ ವಿದೇಶದಲ್ಲಿ ತಲೆಮರ್ಸಿಕೊಂಡಿದ್ದು ಈತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇದೀಗ ದೇವರು ಸಂಗೀತ ಉಗ್ರರ ಬಂಧನ ಪ್ರಕರಣವನ್ನು ಸಿಸಿಬಿಯು ಎನ್‌ಐಎಗೆ ವರ್ಗಾಯಿಸಿದೆ.