ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ 2000 ಸಹಾಯ ಧನ ನೀಡಲಾಗುತ್ತಿದೆ. ಹೀಗೆ ನೀಡಲಾಗುತ್ತಿರುವ ಹಣದಲ್ಲಿ ಅಕ್ಟೋಬರ್ ತಿಂಗಳ ಹಣ ಸಂದಾಯ ಕೆಲ ಯಜಮಾನಿ ಮಹಿಳೆಯರಿಗೆ ಆಗಿಲ್ಲ. ಇವರಿಗೆ ಗುಡ್ ನ್ಯೂಸ್ ಅನ್ನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದಾರೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಗೃಹಲಕ್ಷ್ಮೀ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದಂತ ಅವರು, ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವವರ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಇತ್ಯರ್ಥ ಪಡಿಸಬೇಕು. ಆಗಸ್ಟ್ ನಲ್ಲಿ ಶೇ.88ರಷ್ಟು ಮಂದಿಗೆ ಹಣ ಸಂದಾಯವಾಗಿದೆ. ಸೆಪ್ಟೆಂಬರ್ ನಲ್ಲಿ ಹಂತ ಹಂತವಾಗಿ ಹಣ ಹಾಕಲಾಗಿದೆ. ಅಕ್ಟೋಬರ್ ನಲ್ಲಿ ಶೇ.100ರಷ್ಟು ಫಲಾನುಭವಿಗಳಇಗೆ ಸಂದಾಯವಾಗುವಂತೆ ಮಾಡಬೇಕು ಎಂದು ತಿಳಿಸಿದರು.
ಬ್ಯಾಂಕ್ ಖಾತೆಯ ಸಮಸ್ಯೆಯಿಂದ ಕೆಲ ಗೃಹಲಕ್ಷ್ಮಿಯರಿಗೆ ಅಕ್ಟೋಬರ್ ತಿಂಗಳ ಹಣ ಸಂದಾಯ ಆಗಿಲ್ಲ. ಅದನ್ನು ಸರಿಪಡಿಸಿ, ಶೀಘ್ರವೇ ಅವರ ಖಾತೆಗೂ 2000 ಹಣ ಸಂದಾಯ ಮಾಡುವಂತೆ ಕ್ರಮವಹಿಸುವಂತೆ ಸೂಚಿಸಿದರು.