Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಲ್ಕಿಯಲ್ಲಿ ಹೃದಯ ವಿದ್ರಾವಕ ಘಟನೆ- ಮೂವರು ಮಕ್ಕಳು ಬಾವಿಗೆಸೆದು ಕೊಂದ ತಂದೆ-ಪತ್ನಿ ಹತ್ಯೆಗೆ ಯತ್ನ
    ಇತ್ತೀಚಿನ ಸುದ್ದಿ

    ಮೂಲ್ಕಿಯಲ್ಲಿ ಹೃದಯ ವಿದ್ರಾವಕ ಘಟನೆ- ಮೂವರು ಮಕ್ಕಳು ಬಾವಿಗೆಸೆದು ಕೊಂದ ತಂದೆ-ಪತ್ನಿ ಹತ್ಯೆಗೆ ಯತ್ನ

    June 24, 2022
    Share

    ಮಂಗಳೂರು : ತಂದೆಯೋರ್ವ ತನ್ನ ಮೂವರು ಮಕ್ಕಳು ಹಾಗೂ ಪತ್ನಿಯನ್ನು ಬಾವಿಗೆ ತಳ್ಳಿ ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ರಶ್ಮಿತಾ (13), ಉದಯ (11), ದಕ್ಷಿತ್ (4) ಮೃತಪಟ್ಟ ಮಕ್ಕಳು ಎಂದು ತಿಳಿದು ಬಂದಿದೆ. ಪದ್ಮನೂರು ಶೆಟ್ಟಿಗಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಕೃತ್ಯವೆಸಗಿದಾತ.

    ಗುರುವಾರ ಬೆಳಿಗ್ಗೆ ಎಂದಿನಂತೆ ಮಕ್ಕಳನ್ನು ಶಾಲೆಗೆ ಕಳುಹಿಸಿ ಕೆಲಸಕ್ಕೆ ಹೋಗಿ ಸಂಜೆ ವಾಪಸಾಗುತ್ತಿದ್ದಾಗ ಮಕ್ಕಳು ಮನೆಯಲ್ಲಿ ಇಲ್ಲದ್ದನ್ನು ಕಂಡು ಸಂಶಯಗೊಂಡ ಪತ್ನಿ ಎಲ್ಲಾ ಕಡೆ ಹುಡುಕಾಟ ನಡೆಸಿದ ಬಳಿಕ ಸಮೀಪದ ಮನೆಯ ಬಾವಿ ಕಡೆ ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳು ನೀರಿನಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ. ಬಾವಿಯ ಪಕ್ಕ ನಿಂತು ಸಹಾಯಕ್ಕೆ ಕೂಗುತ್ತಿದ್ದಾಗ ಪತ್ನಿಯನ್ನು ಹಿಂಬಾಲಿಸಿಕೊಂಡು ಬಂದ ಪತಿ ಹಿತೇಶ್, ಪತ್ನಿಯನ್ನೂ ಬಾವಿಗೆ ದೂಡಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ತಕ್ಷಣ ಕಾರ್ಯಾಚರಣೆ ನಡೆಸಿ ಹಿತೇಶ್ ಮತ್ತು ಲಕ್ಷ್ಮೀ ಅವರನ್ನು ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ.

    ಕೂಡಲೇ ಮೂಲ್ಕಿ ಪೋಲಿಸರಿಗೆ ಮಾಹಿತಿ ನೀಡಿದ್ದು, ಅಗ್ನಿ ಶಾಮಕದಳ ಸಹಾಯದಿಂದ ಮೂಲ್ಕಿ ಪೋಲೀಸರು ಮೂವರೂ ಮಕ್ಕಳನ್ನು ಮೇಲಕ್ಕೆತ್ತಿ ಚಿಂತಾಜನಕ ಸ್ಥಿತಿಯಲ್ಲಿ ಅಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮಕ್ಕಳು ಮೃತಪಟ್ಟರು ಎಂದು ತಿಳಿದುಬಂದಿದೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ . ಕೌಟುಂಬಿಕ ಕಲಹವೇ ಕಾರಣ ಎಂದು ಶಂಕಿಸಲಾಗಿದೆ.

    ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    Post Views: 256

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.