ಬಂಟ್ವಾಳ: ಗೂಡ್ಸ್ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ. ಮೃತ ದ್ವಿಚಕ್ರ ವಾಹನ ಸವಾರನನ್ನು ಪ್ರತೀಕ್ಷಾ ಪೂಜಾರಿ ಎನ್ನಲಾಗಿದೆ. ಕನಕರಾಜ್ ಎಂಬವರು ಚಲಾಯಿಸುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.