Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೇಜಾರ್ ಹತ್ಯಾಕಾಂಡ : ಆರೋಪಿ ಪ್ರವೀಣ್ ಚೌಗಲೆ ಬಳಸಿದ್ದ ಚೂರಿ ವಶಕ್ಕೆ ಪಡೆದ ಪೊಲೀಸರು
    ಇತ್ತೀಚಿನ ಸುದ್ದಿ

    ನೇಜಾರ್ ಹತ್ಯಾಕಾಂಡ : ಆರೋಪಿ ಪ್ರವೀಣ್ ಚೌಗಲೆ ಬಳಸಿದ್ದ ಚೂರಿ ವಶಕ್ಕೆ ಪಡೆದ ಪೊಲೀಸರು

    November 19, 2023
    Share

    ಉಡುಪಿ : ನೇಜಾರು ಹತ್ಯಾಕಾಂಡದ ಆರೋಪಿ ಹಂತಕ ಪ್ರವೀಣ್ ಚೌಗುಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು ವಶಪಡಿಸಿಕೊಳ್ಳುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ನವೆಂಬರ್ 15 ರಂದು ಬೆಳಗಾವಿಯ ಕುಡುಚಿಯಲ್ಲಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬಂಧಿಸಿ, ನವೆಂಬರ್ 16ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದರು.

    ನಂತರ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಕೃತ್ಯಕ್ಕೆ ಬಳಸಿದ ಆಯುಧಕ್ಕಾಗಿ ಶೋಧ ಕಾರ್ಯ ನಡೆಸಿದ್ದರು.

    ಆತನು ವಿಚಾರಣೆಯಲ್ಲಿ ಸಮರ್ಪಕ ಮಾಹಿತಿ ನೀಡದೆ ಆರೋಪಿ ಪೊಲೀಸರನ್ನು ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದನು. ಮೊದಲು ಕೃತ್ಯಕ್ಕೆ ಎಸಗಿ ಉಡುಪಿಯಿಂದ ಮಂಗಳೂರಿಗೆ ಹೋಗುವಾಗ ದಾರಿ ಮಧ್ಯೆ ಸೇತುವೆಯಿಂದ ನದಿಗೆ ಎಸೆದಿದ್ದೆ ಎಂದು ಹೇಳಿದ್ದ ಪ್ರವೀಣ್, ಬಳಿಕ ಅದನ್ನು ತನ್ನ ಮಂಗಳೂರಿನ ಮನೆಯ ಬಳಿ ವಿಲೇವಾರಿ ಮಾಡಿದ್ದೆ ಎಂದು ತಿಳಿಸಿದ್ದನು. ಈ ಆಧಾರದಲ್ಲಿ ಮನೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಆಯುಧಕ್ಕಾಗಿ ಒಂದು ಪೂರ್ತಿ ದಿನ ತೀವ್ರ ಶೋಧ ನಡೆಸಿದಾಗ, ಆತನ ಬಿಜೈ ಫ್ಲ್ಯಾಟ್‌ನಲ್ಲಿ ಕೃತ್ಯಕ್ಕೆ ಬಳಸಿಕ ಚೂರಿ ಪತ್ತೆಯಾಗಿತ್ತು. ಅದಲ್ಲದೆ ಕೃತ್ಯಕ್ಕೆ ಬಳಸಿದ ಮಾಸ್ಕ್, ರಕ್ತಸಿಕ್ಕ ಬಟ್ಟೆ, ಕೃತ್ಯಕ್ಕೆ ಬಳಸಿದ ಕಾರು ಸೇರಿದಂತೆ ಎಲ್ಲ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿತಿ ದೊರಕಿದೆ. ಆರೋಪಿ ಪ್ರವೀಣ್ ಚೌಗುಲೆ ಅಪರಾಧ ಕೃತ್ಯ ಎಸಗುವ ಸಂದರ್ಭದಲ್ಲಿ ಬಳಸಿದ ಚೂರಿ ಮತ್ತು ಇತರ ವಸ್ತುಗಳನ್ನು ನಿನ್ನೆ ಮತ್ತು ಇಂದು ವಶಕ್ಕೆ ಪಡೆದುಕೊಳ್ಳಲಾಗಿದೆ. ಉಳಿದ ಮಾಹಿತಿಗಳನ್ನು ತನಿಖೆ ಸಂಪೂರ್ಣಗೊಂಡ ಬಳಿಕ ನೀಡಲಾಗುವುದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಕೆ ಅರಣ್ ತಿಳಿಸಿದ್ದಾರೆ.

    Post Views: 212

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.