Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಡಿಪು: ಗ್ಯಾರೇಜ್‌ ನಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮುಡಿಪು: ಗ್ಯಾರೇಜ್‌ ನಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

    November 21, 2023
    Share

    ಉಳ್ಳಾಲ: ಮುಡಿಪು ಬಳಿಯ ಕಾರ್ ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಕಿಶೋರ್ (25) ಎಂದು ಗುರುತಿಸಲಾಗಿದ್ದು, ಮುಡಿಪುವಿನಲ್ಲಿ ಜಯಾ ಎಂಬುವರಿಗೆ ಸೇರಿದ್ದ ಕಾರು ಗ್ಯಾರೇಜ್‌ನಲ್ಲಿ ಕಬ್ಬಿಣದ ರಾಡ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಕಿಶೋರ್‌ ಕಂಕನಾಡಿಯ ಕಾರ್ ಶೋ ರೂಂನಲ್ಲಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ನ.20 ರಂದು ಕೆಲಸಕ್ಕೆ ಹೋಗಿದ್ದು ತಡವಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಆತನ ಕುಟುಂಬಸ್ಥರು ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದರೂ ಕಿಶೋರ್ ಪತ್ತೆಯಾಗಿರಲಿಲ್ಲ. ಕೊನೆಗೆ ಕಿಶೋರ್‌ ಪ್ರತಿದಿನ ಕೆಲಸ ಬಿಟ್ಟು ಕೆಲಹೊತ್ತು ಕುಳಿತುಕೊಳ್ಳುತ್ತಿದ್ದ ಮುಡಿಪುವಿನ ಗ್ಯಾರೇಜ್‌ ನಲ್ಲಿ ಹುಡುಕಾಟ ನಡೆಸಿದ್ದರು. ಆ ವೇಳೆ ಆತನ ಬೈಕ್‌ ಕಂಡಿದ್ದು, ಗ್ಯಾರೇಜ್‌ನಲ್ಲಿ ಕಬ್ಬಿಣದ ರಾಡ್‌ಗೆ ಕಿಶೋರ್ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಂನ ಮೇಲ್ವಿಚಾರಕ ಆರು ತಿಂಗಳ ಹಿಂದೆಯಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಮೇಲ್ವಿಚಾರಕ ಕಿಶೋರ್ ಅವರಿಗೆ ಅತ್ಯಂತ ಆತ್ಮೀಯ ಸ್ನೇಹಿತರಾಗಿದ್ದು, ಆತನ ಅಗಲಿಕೆಯ ಖಿನ್ನತೆಯಿಂದ ಕಿಶೋರ್‌ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಕೊಣಾಜೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    Post Views: 318

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.