ಮಣಿಪಾಲ: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಣಿಪಾಲದ ರೋಯಲ್ ಅಂಬೆಸಿ ಅಪಾರ್ಟ್‌ಮೆಂಟ್ ಸಮೀಪ ನಡೆದಿದೆ.
ಮೃತರನ್ನು ಹಿರಿಯಡಕ ನಿವಾಸಿ ಸುಶ್ಮಿತಾ(19) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಹುಲ್, ಸ್ಕೂಟರ್ ಸವಾರರಾದ ಅನೂಜ್ ಮತ್ತು ಆದರ್ಶ ಎಂಬವರು ಗಾಯಗೊಂಡಿದ್ದಾರೆ. ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಕಾಯಿನ್ ಸರ್ಕಲ್ ನಿಂದ ಸಿಂಡಿಕೇಟ್ ಸರ್ಕಲ್ ಕಡೆಗೆ ಹೋಗುತ್ತಿದ್ದಾಗ ಬೈಕಿಗೆ, ಅದೇ ದಿಕ್ಕಿನಲ್ಲಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದು ನಾಲ್ವರು ಸವಾರರು ಗಾಯಗೊಂಡರು. ಇವರಲ್ಲಿ ಗಂಭೀರವಾಗಿ ಗಾಯಗೊಂಡ ಸುಶ್ಮಿತಾ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.