Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎಂಡೋ ಸಲ್ಫಾನ್ ಸಂತ್ರಸ್ತರ ಸಮಸ್ಯೆ ಸ್ಥಳೀಯವಾಗಿ ಪರಿಹರಿಸಲು ಡಿಸಿ ಸೂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಎಂಡೋ ಸಲ್ಫಾನ್ ಸಂತ್ರಸ್ತರ ಸಮಸ್ಯೆ ಸ್ಥಳೀಯವಾಗಿ ಪರಿಹರಿಸಲು ಡಿಸಿ ಸೂಚನೆ

    November 25, 2023
    Share

    ಮಂಗಳೂರು: ಎಂಡೋಸಲ್ಫಾನ್ ಸಂತ್ರಸ್ತರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆಯಾ ಆರೋಗ್ಯ ಕೇಂದ್ರ ಮಟ್ಟದಲ್ಲಿ ಎಂಡೋ ಸಂತ್ರಸ್ತರು, ಅವರ ಪೆÇೀಷಕರು, ವೈದ್ಯಾಧಿಕಾರಿಗಳು, ಪಿಡಿಓ, ವಿ.ಎ. ಅವರನ್ನೊಳಗೊಂಡ ತಂಡ ರಚಿಸಬೇಕು.

    ಎಂಡೋಸಲ್ಫಾನ್ ಬಾಧಿತ ಮಕ್ಕಳು ಮಾನಸಿಕ ಅಂಗವೈಕಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ನರಳುತ್ತಾರೆ. ಅವರನ್ನು ಗುರುತಿಸಿ, ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆ ಅಧಿಕಾರಿಗಳು ಗ್ರಾಮವಾರು ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯನ್ನು ತಯಾರಿಸಿ ಅವರಿಗೆ ಅಗತ್ಯವಿರುವ ಔಷಧಗಳು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ತಪ್ಪದೇ ನೀಡಬೇಕು . ಅವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು.ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಎಂಡೋಸಲ್ಫಾನ್ ಪೀಡಿತರ ಮಾಹಿತಿ ಪಟ್ಟಿ ನೋಂದಣಿಯಾಗಿರುತ್ತದೆ. ಆರೋಗ್ಯ ಕೇಂದ್ರಗಳ ಮೂಲಕ ಔಷಧÀಗಳ ವಿತರಣೆಯನ್ನು ಸಂತ್ರಸ್ತರ ಮನೆ ಮನೆಗೆ ತಲುಪಿಸಲು ಕ್ರಮವಹಿಸುವಂತೆ ಸಂಬಂಧಪಟ್ಟವರಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.ಜಿಲ್ಲೆಯಲ್ಲಿ 364 ಎಂಡೋಸಲ್ಫಾನ್ ಪೀಡಿತರು ಸಾವನ್ನಪ್ಪಿದ್ದು, 6314 ಮಂದಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಎಂಡೋಸಲ್ಫಾನ್ ಕೋಶ ನೋಡಲ್ ಅಧಿಕಾರಿ  ಡಾ. ನವೀನ್‍ಚಂದ್ರ ಕುಲಾಲ್ ಹೇಳಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಆರೋಗ್ಯ ಇಲಾಖೆ ಎಂಡೋಸಲ್ಫಾನ್ ವಿಭಾಗದ ಸಮನ್ವಯಾಧಿಕಾರಿ ಸಜೀವುದ್ದೀನ್, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

    Post Views: 208

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.