Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯಜಮಾನಿಯರಿಗೆ ಗುಡ್ ನ್ಯೂಸ್ : ಇನ್ಮುಂದೆ ‘ಗೃಹಲಕ್ಷ್ಮಿ’ ಹಣ, ಗಂಡನ ಖಾತೆಗೆ ಜಮಾ
    ಇತ್ತೀಚಿನ ಸುದ್ದಿ

    ಯಜಮಾನಿಯರಿಗೆ ಗುಡ್ ನ್ಯೂಸ್ : ಇನ್ಮುಂದೆ ‘ಗೃಹಲಕ್ಷ್ಮಿ’ ಹಣ, ಗಂಡನ ಖಾತೆಗೆ ಜಮಾ

    November 25, 2023
    Share

    ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ 1.10 ಕೋಟಿ ಮಹಿಳೆಯರಿಗೆ 2,000 ರೂ. ನೀಡಲಾಗುತ್ತಿದ್ದು, ಇದುವರೆಗೆ ಕೆಲವು ಮಹಿಳೆರಿಗೆ ಹಣ ಬಂದಿಲ್ಲ.

    ಯಜಮಾನಿಯರ ಬ್ಯಾಂಕ್ ಖಾತೆಯಲ್ಲಾದ ಹಲವು ತಾಂತ್ರಿಕ ದೋಷಗಳು ಹಾಗೂ ಕೆಲವು ತಾಂತ್ರಿಕ ತೊಂದರೆಗಳಿಂದ ಇನ್ನೂ ಯಜಮಾನಿಯರ ಖಾತೆಗೆ ಹಣ ಬಂದಿಲ್ಲ.

    ಈ ಹಿನ್ನೆಲೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

    ಮಹಿಳೆಯರ ಖಾತೆಗೆ ಮಾತ್ರವಲ್ಲದೇ ಮನೆ ಯಜಮಾನನ ಖಾತೆಗೂ ಇನ್ಮುಂದೆ ಹಣ ಬರುತ್ತದೆ. ಮನೆ ಯಜಮಾನಿಯ ಖಾತೆಯಲ್ಲಿ ಸಮಸ್ಯೆ ಇದ್ದರೆ ಎರಡನೇ ಸದಸ್ಯ ಅಥವಾ ಎರಡನೇ ಹಿರಿಯ ಸದಸ್ಯರಿಗೆ ಹಣ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.

    ಕುಟುಂಬದ ಮೊದಲ ಯಜಮಾನ ಅಲ್ಲದೇ ಇದ್ದರೆ ಎರಡನೆಯ ಸದಸ್ಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ರೇಷನ್ ಕಾರ್ಡ್ ಆಧಾರದ ಮೇಲೆ ಮನೆಯ ಹಿರಿಯ ವ್ಯಕ್ತಿ ಯಾರೆಂದು ಗುರುತಿಸಿ ಅವರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಇನ್ನುಮುಂದೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮನೆ ಮನೆಗೆ ಬಂದು ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಿ ಹಣ ಹಾಕುತ್ತಾರೆ.

    ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

    Post Views: 294

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.